
ಬೆಂಗಳೂರು (ಜೂ.26): ನಟ ದರ್ಶನ್ ಪುತ್ರ ವಿನೀಶ್(Actor darshan's Son vineesh) ಅವರು ಇದ್ದರು ಎನ್ನಲಾದ ಐಷಾರಾಮಿ ಕಾರು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣ(Social media)ದಲ್ಲಿ ವೈರಲ್(Viral) ಆಗಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟಗಾಯಗಳಾಗಿದೆ.
ಆರ್.ಆರ್.ನಗರದ ರಸ್ತೆಯಲ್ಲಿ ಹೋಗುತ್ತಿದ್ದ ಫೋರ್ಡ್ ಎಂಡೆವರ್ ಐಷಾರಾಮಿ ಕಾರು, ಮುಂಭಾಗದಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆಗೆ ನೇರ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಆದರೆ ಕಾರನ್ನು ವಿನೀಶ್ ಚಲಾಯಿಸುತ್ತಿದ್ದರಾ ಅಥವಾ ಬೇರೆ ಯಾರಾದರೂ ಚಲಾಯಿಸುತ್ತಿದ್ದರಾ ಎಂಬುದು ಖಚಿತಪಟ್ಟಿಲ್ಲ.
ಅಪಘಾತ ಸಂಭವಿಸುತ್ತಿದ್ದಂತೆ ಕಾರನ್ನು ಸುತ್ತುವರಿದ ದ್ವಿಚಕ್ರ ವಾಹನ ಸವಾರ ಹಾಗೂ ಸ್ಥಳದಲ್ಲಿದ್ದ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಕಾರಿನಿಂದ ಇಳಿದವರು ಮತ್ತು ಸ್ಥಳೀಯರ ನಡುವೆ ರಸ್ತೆಯಲ್ಲೇ ವಾಗ್ವಾದ ಹಾಗೂ ಮಾತಿನ ಚಕಮಕಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ವಿನೀಶ್ ತಾಯಿ ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟನೆ ನೀಡಿದ್ದು. ಅವರ ಇನ್‌ಸ್ಟಾಮ್ ಪೋಸ್ಟ್ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ: ಸವಾರರ ಸುರಕ್ಷತೆ ಖಚಿತಪಡಿಸಲು ಕಾರಿನಿಂದ ಇಳಿದಿದ್ದ ದರ್ಶನ್ ಪುತ್ರ, ಅಪಘಾತ ಕೇಸ್‌ಗೆ ವಿಜಯಲಕ್ಷ್ಮಿ ಸ್ಪಷ್ಟನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ