
ಬೆಂಗಳೂರು (ಸೆ.15): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿ ಬಂಧನದಲ್ಲಿರುವ ನಟ ದರ್ಶನ್, ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ನೀಡದಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್‌ನ ಆದೇಶದ ನಂತರವೂ ಜೈಲಾಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ದರ್ಶನ್ ಆರೋಪಿಸಿದ್ದಾರೆ.
ಜೈಲಿನಲ್ಲಿ ಕನಿಷ್ಠ ಸೌಲಭ್ಯವೂ ನೀಡುತ್ತಿಲ್ಲ:
ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳಾದ ಹಾಸಿಗೆ, ದಿಂಬು ಸೇರಿದಂತೆ ಜೈಲು ಮ್ಯಾನ್ಯುಯಲ್‌ನಲ್ಲಿ ಉಲ್ಲೇಖಿಸಿರುವ ಯಾವುದೇ ಸೌಕರ್ಯವನ್ನು ಒದಗಿಸಿಲ್ಲ. ಕೇವಲ ಕಾರಿಡಾರ್‌ನಲ್ಲಿ ವಾಕ್ ಮಾಡಲು ಮಾತ್ರ ಅನುಮತಿ ನೀಡಲಾಗಿದೆ. ಕೋರ್ಟ್‌ನ ಆದೇಶವನ್ನು ಜೈಲಾಧಿಕಾರಿಗಳು ಪಾಲಿಸದಿರುವುದರಿಂದ ನ್ಯಾಯಾಂಗ ನಿಂದನೆಗೆ ಶಿಫಾರಸು ಮಾಡುವಂತೆ ದರ್ಶನ್ ಪರ ವಕೀಲ ಎಸ್. ಸುನೀಲ್ ಕುಮಾರ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಜೈಲಾಧಿಕಾರಿಗಳ ವಿರುದ್ಧ ಆಕ್ಷೇಪ
ಕನಿಷ್ಠ ಸೌಲಭ್ಯ ನೀಡಿ ಎಂಬ ಕೋರ್ಟ್ ಆದೇಶ ಸ್ವೀಕರಿಸಲಿಲ್ವಾ ಅಧಿಕಾರಿಗಳು? ಜೈಲಾಧಿಕಾರಿಗಳಿಗೆ ಸೆಷನ್ಸ್ ಕೋರ್ಟ್ ಆದೇಶ ನೀಡಲು ಹೋಗಿದ್ದ ದರ್ಶನ್ ಪರ ವಕೀಲರು. ಈ ವೇಳೆ ವಕೀಲರೊಂದಿಗೆ ಜೈಲಾಧಿಕಾರಿಗಳ ಸರಿಯಾಗಿ ಸ್ಪಂದಿಸಿಲ್ಲ. ಕೋರ್ಟ್‌ನ ಸ್ಪಷ್ಟ ಆದೇಶದ ನಂತರವೂ ಜೈಲಾಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಇದು ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ದರ್ಶನ್ ಪರ ವಕೀಲರು ಆರೋಪಿಸಿದ್ದಾರೆ.
ನ್ಯಾಯಾಂಗ ನಿಂದನೆಗೆ ಶಿಫಾರಸು ಮಾಡುತ್ತಾ ಕೋರ್ಟ್?
ದರ್ಶನ್‌ರ ವಕೀಲರು ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಗೆ ಶಿಫಾರಸು ಮಾಡುವಂತೆ ಸೆಷನ್ಸ್ ಕೋರ್ಟ್‌ಗೆ ಕೋರಿದ್ದಾರೆ. ಈ ವಿಷಯವನ್ನು ಹೈಕೋರ್ಟ್‌ಗೆ ಒಪ್ಪಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ಕಾನೂನು ಕ್ರಮದ ಬಗ್ಗೆ ಕುತೂಹಲ ಮೂಡಿದೆ, ಒಂದು ವೇಳೆ ಕೋರ್ಟ್ ಆದೇಶವನ್ನು ಜೈಲಾಧಿಕಾರಿಗಳು ಉಲ್ಲಂಘಿಸಿರುವುದು ಸಾಬೀತಾದರೆ, ಇದು ಗಂಭೀರ ಕಾನೂನು ಸಮಸ್ಯೆಗೆ ಕಾರಣವಾಗಬಹುದು. ದರ್ಶನ್‌ರ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಶೀಘ್ರದಲ್ಲೇ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಈ ಸುದ್ದಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮೊಂದಿಗೆ ಇರಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ