ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ: ನಟಿ ರಮ್ಯಾ

Published : May 02, 2025, 08:09 AM ISTUpdated : May 02, 2025, 08:26 AM IST
ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ: ನಟಿ ರಮ್ಯಾ

ಸಾರಾಂಶ

ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ ಹೇಳಿದ್ದಾರೆ.

 ಬೆಂಗಳೂರು (ಮೇ.2): ‘ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ ಹೇಳಿದ್ದಾರೆ.

ಪಹಲ್ಗಾಂ ದುರಂತಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ‘ನಾವು ನಮ್ಮ ನಾಯಕರನ್ನು ಆಯ್ಕೆ ಮಾಡಿ ಕಳಿಸೋದು ನಮ್ಮ ರಕ್ಷಣೆ ಮಾಡಲಿ ಅಂತ ಅಲ್ವಾ? ಹೀಗಿರುವಾಗ ರಕ್ಷಣೆ ನೀಡದೆ ಯುದ್ಧ ಅಂದರೆ ಬಲಿಯಾಗೋದು ಅಮಾಯಕರಲ್ವಾ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 'ನಮಗೆ ನಷ್ಟವಾದ್ರೂ ಚಿಂತೆಯಿಲ್ಲ; ಒಂದು ಟೊಮೆಟೋ ಕಳಿಸೋಲ್ಲ' : ಪಾಕ್‌ಗೆ ಕೋಲಾರ ರೈತರಿಂದ ಬಿಗ್ ಶಾಕ್!

‘ಪಹಲ್ಗಾಂ ಘಟನೆಗೆ ಸಂಬಂಧಿಸಿ ಇಂಟೆಲಿಜೆನ್ಸ್‌ನ ವೈಫಲ್ಯ, ರಕ್ಷಣಾ ಲೋಪ ಪ್ರಶ್ನೆ ಮಾಡಲೇ ಬೇಕು. ಗಡಿಭಾಗದಂಥಾ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಭದ್ರತೆ ಇರಲೇಬೇಕಲ್ವಾ. ಈ ಲೋಪ ಯಾಕೆ ಆಯ್ತು ಅನ್ನುವುದನ್ನು ಅವಲೋಕಿಸಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!

‘ಹಿಂದೆ ಉಪೇಂದ್ರ ಜೊತೆಗಿನ ಸಿನಿಮಾವೊಂದರ ಶೂಟಿಂಗ್‌ಗಾಗಿ ಪಹಲ್ಗಾಂಗೆ ಹೋಗಿ ಬಂದಿದ್ದೇನೆ. ಆಗ ಫುಲ್ ಸೆಕ್ಯುರಿಟಿ ಕೊಟ್ಟಿದ್ದರು. ಆದರೆ ಜನಸಾಮಾನ್ಯರಿಗೂ ರಕ್ಷಣೆ ಬೇಕು. ರಕ್ಷಣೆ ಬಗ್ಗೆ ಚಿಂತಿಸಬೇಕೇ ಹೊರತು ಯುದ್ಧದ ಬಗ್ಗೆ ಅಲ್ಲ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್