ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮಹಾರಾಜ ಯದುವೀರ್ ವಿರುದ್ಧ ನಟಿ ರಮ್ಯಾ ಪ್ರಚಾರ

Published : Mar 25, 2024, 01:03 PM IST
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮಹಾರಾಜ ಯದುವೀರ್ ವಿರುದ್ಧ ನಟಿ ರಮ್ಯಾ ಪ್ರಚಾರ

ಸಾರಾಂಶ

ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ್ ಪರವಾಗಿ ನಟಿ ರಮ್ಯಾ ಪ್ರಚಾರಕ್ಕೆ ಕರೆತರಲು  ಕೈ ಮುಖಂಡರು ಪ್ಲ್ಯಾನ್ ಮಾಡಿದ್ದಾರೆ.

ಮೈಸೂರು (ಮಾ.25): ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿದೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದಕ್ಕೆ ಪ್ರಭಲ ಪೈಪೋಟಿ ಅಭ್ಯರ್ಥಿಯನ್ನು ಹುಡುಕದೇ, ಸ್ಥಳೀಯ ನಾಯಕ ಎಂ. ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದೆ. ಈಗ ಮಹಾರಾಜ ಯದುವೀರ್ ಅವರ ವಿರುದ್ಧ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕಿ ನಟಿ ರಮ್ಯಾ ಅವರನ್ನು ಕರೆತರುವುದಕ್ಕೆ ಕೈ ಮುಖಂಡರು ಪ್ಲ್ಯಾನ್ ಮಾಡಿದ್ದಾರೆ.

ಹೌದು, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದ ಸಂಸದ ಪ್ರತಾಪ್ ಸಿಂಹ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ಇನ್ನು ರಾಜ್ಯದ ಬೇರಾವ ಸಂಸದನೂ ಕೂಡ ಮೈಸೂರು ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಎಷ್ಟೇ ಅಭಿವೃದ್ಧಿ ಕಾರ್ಯ ಮಾಡಿದರೂ 2024ರ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೊಡದೇ, ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಯದುವೀರ್ ಅವರಿಗೆ ಟಿಕೆಟ್ ಕೊಡುವುದಕ್ಕೆ ಅವರ ಪತ್ನಿ ಮಹಾರಾಣಿ ತ್ರಿಷಿಕಾ ಕುಮಾರಿ ಅವರ ತಂದೆಯ ಸಾಕಷ್ಟು ಶ್ರಮವೂ ಇದೆ ಎಂದು ತಿಳಿದುಬಂದಿದೆ. ಇನ್ನು ಮಹಾರಾಜ ಯದುವೀರ್ ಅವರು ಈಗಾಗಲೇ ಸ್ಥಳೀಯ ಮಟ್ಟಕ್ಕಿಳಿದು ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ.

 ಪ್ರಚಾರ ಕಾರ್ಯಕ್ಕೆ ಸಂಸದ ಪ್ರತಾಪ್ ಸಿಂಹ ಗೈರು! ಬಿಜೆಪಿ ಅಭ್ಯರ್ಥಿ ಯದುವೀರ ಒಡೆಯರ್ ಹೇಳಿದ್ದೇನು?

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಯದುವೀರ್ ಅವರಿಗೆ ವಿರುದ್ಧವಾಗಿ ಕಾಂಗ್ರೆಸ್‌ನಿಂದ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ಕೊಡಲಾಗಿದೆ. ಇನ್ನು ಮಹಾರಾಜ ಯದುವೀರ್ ಅವರಿಗೆ ಲಕ್ಷ್ಮಣ್ ಪ್ರಭಲ ಪೈಪೋಟಿ ನೀಡುವುದಕ್ಕೆ ಮುಂದಾದರೂ, ಮಹಾರಾಜರ ವಿರುದ್ಧ ಯಾವುದೇ ಹಗುರ ಮಾತುಗಳನ್ನಾಡದೇ ಕೇವಲ ಪಕ್ಷದ ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತಯಾಚನೆ ಮತ್ತು ಪ್ರಚಾರ ಮಾಡುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಹೀಗಾಗಿ, ಪ್ರಚಾರದಲ್ಲಿ ಜನರನ್ನು ಸೆಳೆಯುವ ನಿಟ್ಟಿನಲ್ಲಿ ಸ್ಟಾರ್ ಪ್ರಚಾರಕಿ ನಟಿ ರಮ್ಯಾ ಅವರನ್ನು ಕರೆತರಲು ಯೋಜನೆ ರೂಪಿಸಿದ್ದಾರೆ.

ರಂಗೇರುತ್ತಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಈಗ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಸ್ಟಾರ್ ಪ್ರಚಾರಕಿಯಾಗಿ ಮಾಜಿ ಸಂಸದೆ ನಟಿ ರಮ್ಯ ಕರೆತರಲು ಕೈ ನಾಯಕರ ಪ್ಲ್ಯಾನ್ ಮಾಡಿದ್ದಾರೆ. ನಟಿ ರಮ್ಯ ಅವರ ಪಾಪ್ಯುಲಾರಿಟಿ ಬಳಸಿಕೊಳ್ಳಲು ಕಾಂಗ್ರೆಸ್ ಚಿಂತನೆ ಮಾಡಲಾಗಿದ್ದು, ಮೈಸೂರು, ಮಂಡ್ಯ ಕ್ಷೇತ್ರಗಳಲ್ಲಿ ಮಾಜಿ ಸಂಸದೆಯ ಪ್ರಚಾರಕ್ಕೆ ಮುಂದಾಗಲಿದ್ದಾರೆ ಎಂಬ ಸುಳಿವೂ ಸಿಕ್ಕಿದೆ.

ಕೊಡಗು: ಚುನಾವಣಾ ಪ್ರಚಾರ ಅಖಾಡಕ್ಕಿಳಿದ ಯದುವೀರ್ ಒಡೆಯರ್; ಜನಸಾಮಾನ್ಯರಂತೆ ಸರದಿ ನಿಂತು ಊಟ ಮಾಡಿದ ರಾಜ ವಂಶಸ್ಥ!

ನಟಿ ರಮ್ಯಾ ಮಂಡ್ಯ ಸೇರಿದಂತೆ ಹಳೆ‌ ಮೈಸೂರು ಭಾಗದಲ್ಲಿ ತಮ್ಮದೇ ಪಾಪ್ಯುಲಾರಿಟಿ ಹೊಂದಿದ್ದಾರೆ. 2023ರ‌ ವಿಧಾನಸಭಾ ಚುನಾವಣೆಯಲ್ಲೂ ಹಳೆ ಮೈಸೂರು ಭಾಗಗಳಲ್ಲಿ ಸಿದ್ದರಾಮಯ್ಯ, ಮಹದೇವಪ್ಪ, ದರ್ಶನ್ ಧ್ರುವನಾರಾಯಣ್ ಪರವಾಗಿ ಮೋಹಕ ತಾರೆ ರಮ್ಯಾ ಪ್ರಚಾರ ನಡೆಸಿದ್ದರು. ಈಗ ಪುನಃ ಲೋಕಸಭೆಯಲ್ಲೂ ಅವರ ಪ್ರಚಾರವನ್ನು ಬಳಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್