
ಬೆಂಗಳೂರು (ಆ.02): ಹೈವೇ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಬೆಂಗಳೂರು-ಪುಣೆ ನ್ಯಾಶನಲ್ ಹೈವೆ ರಸ್ತೆಯನ್ನು ಸಂಚಾರ ಮತ್ತು ಸುರಕ್ಷತಾ ಪ್ರಾಧಿಕಾರ ಎಡಿಜಿಪಿ ಅಲೋಕ್ ಕುಮಾರ್ ಇಂದು ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯದ ಹೈವೇ ರಸ್ತೆಗಳಲ್ಲಿ ಹೆಚ್ಚಾಗಿರುವ ಅಪಘಾತಗಳ ಸಂಖ್ಯೆ ಹಾಗೂ ಮೈಸೂರು ದಶಪಥ ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ಧಿಯಾಗಿತ್ತು.
ಇತ್ತೀಚೆಗೆ ಮೈಸೂರು ದಶಪಥ ರಸ್ತೆ ಪರಿಶೀಲನೆ ಮಾಡಿ ಅಲೋಕ್ ಕುಮಾರ್ ಕ್ರಮ ಕೈಗೊಂಡಿದ್ದರು. ಇದೀಗ ಬೇರೆ ಬೇರೆ ಹೈವೇ ರಸ್ತೆಗಳ ಪರಿಶೀಲನೆ ನಡೆಸುತ್ತಿದ್ದು, ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡುತ್ತಿದ್ದಾರೆ. ಅಲೋಕ್ ಕುಮಾರ್‌ಗೆ ಐಜಿಪಿ ರವಿಕಾಂತೇಗೌಡ, ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಹಿತಿ ನೀಡುತ್ತಿದ್ದು, ಫ್ಲೈ ಓವರ್‌ಗಳ, ಹೈವೇ ಪರಿಶೀಲನೆ ನಡೆಸಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆಯುತ್ತಿದ್ದಾರೆ.
ಗ್ರಾಹಕರ ಕೈಗೆ ಎಟುಕದ ಟೊಮೆಟೋ: ಹುಣಸೆ ಹಣ್ಣು ಕೂಡಾ ದುಬಾರಿ
ಬೆಂ-ಮೈಸೂರು ಎಕ್ಸ್‌ಪ್ರೆಸ್‌ವೇ ಸುರಕ್ಷತಾ ಕ್ರಮಕ್ಕೆ ಪ್ರಾಧಿಕಾರ ನಿರ್ಲಕ್ಷ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಮರ್ಪಕವಾಗಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಂಚಾರ ಮತ್ತು ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಹೆದ್ದಾರಿ ಪರಿಶೀಲನೆ ಬಳಿಕ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿಕೊಳ್ಳುವಂತಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹೆದ್ದಾರಿಯಲ್ಲಿನ ಅಪಘಾತ ಪ್ರದೇಶ, ಎಂಟ್ರಿ-ಎಕ್ಸಿಟ್ ಸ್ಥಳಗಳಲ್ಲಿ ಸೂಚನಾ ಫಲಕವನ್ನು ಇನ್ನೂ ಹಾಕಿಲ್ಲ. ಹೆದ್ದಾರಿ ಗಸ್ತುವಾಹನ, ತುರ್ತು ವಾಹನಗಳ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂಬುದು ಸೇರಿದಂತೆ ಹಲವು ನ್ಯೂನತೆಗಳನ್ನು ವಿವರಿಸಿದರು. ಅಲ್ಲದೆ, ಮುಂದಿನ ಭೇಟಿಯ ವೇಳೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಎನ್‌ಎಚ್‌ಎಐ ವಿರುದ್ಧ ಅಸಮಾಧಾನ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಮರ್ಪಕವಾಗಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಂಚಾರ ಮತ್ತು ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಹೆದ್ದಾರಿ ಪರಿಶೀಲನೆ ಬಳಿಕ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿಕೊಳ್ಳುವಂತಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹೆದ್ದಾರಿ ಯಲ್ಲಿನ ಅಪಘಾತ ಪ್ರದೇಶ, ಎಂಟ್ರಿ-ಎಕ್ಸಿಟ್ ಸ್ಥಳಗಳಲ್ಲಿ ಸೂಚನಾ ಫಲಕವನ್ನು ಇನ್ನೂ ಹಾಕಿಲ್ಲ.
ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಮತ್ತೆ ಪ್ರಧಾನಿ ಮೋದಿ ವಾಗ್ದಾಳಿ
ಹೆದ್ದಾರಿ ಗಸ್ತುವಾಹನ, ತುರ್ತು ವಾಹನಗಳ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂಬುದು ಸೇರಿದಂತೆ ಹಲವು ನ್ಯೂನತೆಗಳನ್ನು ವಿವರಿಸಿದರು. ಅಲ್ಲದೆ, ಮುಂದಿನ ಭೇಟಿಯ ವೇಳೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳಿಂದ ಸಾವು-ನೋವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲಿ ಹೆದ್ದಾರಿಯನ್ನು ಪರಿಶೀಲನೆ ಮಾಡಿದ್ದ ಅಲೋಕ್‌ಕುಮಾರ್, ಸುರ ಕ್ಷತೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆ ಸುರಕ್ಷತಾ ಕ್ರಮಗಳು ಎಷ್ಟರಮಟ್ಟಿಗೆ ಅನುಷ್ಠಾನಗೊಂಡಿವೆ ಎಂಬುದನ್ನು ಮಂಗಳವಾರ ಖುದ್ದು ವೀಕ್ಷಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ