Bengaluru-Mysuru Expressway ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿ.ಎಲ್ ಕ್ಯಾನ್ಸಲ್: ಎಡಿಜಿಪಿ ಅಲೋಕ್‌

By Gowthami KFirst Published Jun 27, 2023, 3:26 PM IST
Highlights

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು  ಎಡಿಜಿಪಿ ಅಲೋಕ್‌ ಕುಮಾರ್‌  ಪರಿಶೀಲನೆ ನಡೆಸಿದರು.

ರಾಮನಗರ (ಜೂ.27): ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸುತ್ತಿಲ್ಲ. ನಮ್ಮ‌ ಸಿಬ್ಬಂದಿ ಕಂಡರೆ, ವಾಹನ ಸವಾರರಿಗೆ ಒಂದು ಭಯ ಇರುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು- ಮೈಸೂರು ದಶಪಥ ಎಕ್ಸ್‌ಪ್ರೆಸ್‌ ಹೆದ್ದಾರಿ ಅಪಘಾತದ ಸ್ಥಳಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿ.ಎಲ್ ಕ್ಯಾನ್ಸಲ್ ಆಗಲಿದೆ ಎಂದಿದ್ದಾರೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಎಡಿಜಿಪಿ ಅಲೋಕ್‌ ಕುಮಾರ್‌  ಅಧಿಕಾರಿಗಳೊಂದಿಗೆ ಭೇಟಿ ನೀಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದರು.

Latest Videos

ಬೆಂಗಳೂರಿನಿಂದ ಬೆಳಗಾವಿವರೆಗೆ ಹೋದರೂ ಒಬ್ಬ ಸಿಬ್ಬಂದಿ ಸಹ ಸಮವಸ್ತ್ರದಲ್ಲಿ ಕಾಣುವುದಿಲ್ಲ. ಸಿಬ್ಬಂದಿ ಕೇವಲ ರಿಫ್ಲೆಕ್ಟ್ ಜಾಕೆಟ್ ಹಾಕಿಕೊಂಡು ಇದ್ದರೆ ಸಾಕು. ಜನ ಭಯದಿಂದ ವಾಹನದ ವೇಗ ತಗ್ಗಿಸುತ್ತಾರೆ ಎಂದರು. ದಾವಣಗೆರೆಯಲ್ಲಿ ನಾನು ಎಸ್ ಪಿ ಇದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡಿಯೇ, ಶೇ 40ರಷ್ಟು ಅಪಘಾತ ತಗ್ಗಿಸಿದ್ದೆವು‌. ಎಲ್ಲಾ ಹೆದ್ದಾರಿಗಳಲ್ಲಿ ಗಸ್ತು ಆರಂಭಿಸಬೇಕು ಎಂದು ಸೂಚಿಸಿದರು‌. ಹೆದ್ದಾರಿ ಪಹರೆಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಪರಿಶೀಲಿಸಿದ ಅವರು, ಅಪಘಾತ ತಡೆಗೆ ಹೆದ್ದಾರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿ ಕೈಗೊಂಡಿರುವ ಕ್ರಮಗಳನ್ನು ವಿಚಾರಿಸಿದರು. ಅಪಘಾತದ ಮಾಹಿತಿ ಪುಸ್ತಕವನ್ನು ಪರಿಶೀಲಿಸಿದರು‌.

ದಶಪಥ ಹೆದ್ದಾರಿ ವೀಕ್ಷಣೆ ಬಳಿಕ ಎಡಿಜಿಪಿ ಅಲೋಕ್ ಕುಮಾರ್  ಮಾತನಾಡಿ, ನಾನು ಈ ರಸ್ತೆಯಲ್ಲಿ ಬಹಳ ಭಾರಿ ಸಂಚರಿಸಿದ್ದೇನೆ. ಕಳೆದ ಐದಾರು ತಿಂಗಳಿನಿಂದ 58 ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 48ಕ್ಕೂ ಹೆಚ್ಚು ಅಪಘಾತಗಳ ಆಗಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿ ಸೇರಿ ಕಳೆದ 4ತಿಂಗಳಿಂದ 120ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಎಲ್ಲೆಲ್ಲಿ ಅಪಘಾತ ನಡೆದಿದೆ‌ ಆ ಸ್ಥಳಗಳ ಸಮಸ್ಯೆ ಬಗ್ಗೆ ಪರಿಶೀಲಿಸಿದ್ದೇವೆ. ಹೆದ್ದಾರಿಯಲ್ಲಿ ಎಂಟ್ರಿ ಎಕ್ಸಿಟ್ ಸಮಸ್ಯೆ ಇದೆ. ಕೆಲವೆಡೆ ರಸ್ತೆ ಅಂಕುಡೊಂಕಿದೆ. ಇದರಿಂದ ವಾಹನಗಳು ಡಿವೈಡರ್ ಹಾರುತ್ತಿವೆ. ಹೈವೆಯಲ್ಲಿ ಲೇನ್ ಡಿಸಿಪ್ಲಿನ್ ಬಳಸಬೇಕು. ಈಗಾಗಲೇ ನಾಲ್ಕು ಹೈವೆ ಪೆಟ್ರೊಲಿಯಂ ವಾಹನಗಳ ಬಿಟ್ಟಿದ್ದೇವೆ. ಹೈ ಸ್ಪಿಡ್ ಲಿಮಿಟ್ ತಡೆಗೆ ಸ್ಪೀಡ್ ರೆಡಾರ್ ಅಳವಡಿಕೆ ಮಾಡುತ್ತೇವೆ ಎಂದರು.

ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆಗೆ ಚಾರ್ಚ್ ಫ್ರೇಮ್ ರೆಡಿಯಾಗಿದೆ: ಸಚಿವ

ಇದೇ ವೇಳೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿ.ಎಲ್ ಕ್ಯಾನ್ಸಲ್ ಆಗಲಿದೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಡ್ರಂಕ್ ಅಂಡ್ ಡ್ರೈವ್ ಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ವೇಗ ಮಿತಿ ಮೀರಿ ವಾಹನ ಚಾಲನೆ ಮಾಡಿದ್ರೆ ಕೇಸ್ ಹಾಕ್ತೇವೆ. ಕನಿಷ್ಠ ಶೇ.25 ರಷ್ಟು ಅಪಘಾತ ಕಡಿಮೆ ಮಾಡುವ ಗುರಿ ಇದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ, ಸೂಚನೆ ನೀಡಿದ್ದೇವೆ. ಅಮೂಲ್ಯವಾದ ಜೀವಕ್ಕಾಗಿ ನಿಧಾನವಾಗಿ ಚಲಿಸಿ. ನಮ್ಮ ಕುಟುಂಬಕ್ಕೆ ನಾವುಗಳೇ ಮುಖ್ಯ. ಸುಗಮ ಸಂಚಾರಕ್ಕೆ ಸೀಲ್ಟ್ ಬೆಲ್ಟ್, ಇಂಡಿಕೇಟರ್ ಬಳಕೆ, ಸ್ಪೀಡ್ ಲಿಮಿಟ್ ನಲ್ಲಿಯೇ ವಾಹನ ಚಲಾಯಿಸಬೇಕು. ದಶಪಥ ಹೆದ್ದಾರಿಯಲ್ಲಿ ಗರಿಷ್ಟ ಮಿತಿ 100 ಕಿ.ಮೀ ಇದೆ. ತಿರುವುಗಳಲ್ಲಿ 60- 80 ವೇಗ ಮಿತಿ ಬಳಕೆ ಮಾಡಬೇಕು ಎಂದು ವಾಹನಸವಾರರಿಗೆ ಎಡಿಜಿಪಿ ಅಲೋಕ್ ಕುಮಾರ್ ಸಲಹೆ ನೀಡಿದ್ದಾರೆ.

ಭಾರತ ವಿಶ್ವಕಪ್ ಗೆದ್ದ 40 ವರ್ಷದ ಸಂಭ್ರಮಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಕಾರ್ಡ್ ಬಿಡುಗಡೆ

ದಶಪಥ ಹೆದ್ದಾರಿಯಲ್ಲಿ ಎನ್.ಎಚ್.ಅಧಿಕಾರಿಗಳ ನ್ಯೂನ್ಯತೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಸೂಚನೆಗಳನ್ನು ಹೈವೆ ಪ್ರಾಧಿಕಾರ ಪಾಲಿಸದಿದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾವು ನೀಡಿರುವ ಕಾಲವಕಾಶವನ್ನು ಮೀರಿದರೆ, ಕ್ರಮ ಖಂಡಿತವಾಗಿ ತೆಗೆದುಕೊಳ್ಳುತ್ತೇವೆ. ಪ್ರಾಧಿಕಾರ ಅಂಬೂಲೆನ್ಸ್, ಹೈವೆ ಪೆಟ್ರೋಲಿಯಂ ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ತುರ್ತು ಗೇಟ್ ಗಳನ್ನು ಸಿದ್ದ ಪಡಿಸಬೇಕು. ಹಲವೆಡೆ ಸ್ಕೈವಾಕ್ ನುರ್ಮಾಣ ಮಾಡಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಒತ್ತಡವನ್ನು ಹೇರುತ್ತೆವೆ. ಹೆದ್ದಾರಿ ವೀಕ್ಷಣೆ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ.

ದಶಪಥ ಹೆದ್ದಾರಿಯಲ್ಲಿ ವಾಹನ ಸಂಚಾರ ಪ್ರಾರಂಭವಾದಾಗಿನಿಂದಲೂ ಅಪಘಾತಗಳು ನಡೆಯುತ್ತಿದ್ದು, ಬಹಳಷ್ಟುಜನ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಇದಕ್ಕೆ ರಸ್ತೆಯಲ್ಲಿರುವ ಬಹಳಷ್ಟುನ್ಯೂನತೆಗಳು ಕಾರಣ ಎಂಬುದು ಪೊಲೀಸ್‌ ಅಧಿಕಾರಿಗಳು ಈ ಹಿಂದೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಕಂಡು ಬಂದಿತ್ತು. ಅಪಘಾತಕ್ಕೆ ಕಾರಣವಾದ ಕೆಲವೊಂದು ಸಮಸ್ಯೆಗಳನ್ನು ಪಟ್ಟಿಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಜಿಲ್ಲಾ ಪೊಲೀಸ್‌ ಇಲಾಖೆ ವರದಿಯೊಂದನ್ನು ಸಲ್ಲಿಸಿತ್ತು. ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅಪಘಾತಗಳ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು. 

click me!