ಬಿಎಸ್‌ವೈ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಅಭಿಮಾನಿ!

Published : Jul 27, 2021, 01:51 PM IST
ಬಿಎಸ್‌ವೈ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಅಭಿಮಾನಿ!

ಸಾರಾಂಶ

* ರಾಜಕೀಯ ಗೊಂದಲಗಳಿಗೆ ತೆರೆ ಎಳೆದ ಬಿಎಸ್‌ವೈ ರಾಜೀನಾಮೆ * ನೆಚ್ಚಿನ ನಾಯಕನ ರಾಜೀನಾಮೆಯಿಂದ ಬೆಂಬಲಿಗರಿಗೆ ಆಘಾತ * ರಾಜೀನಾಮೆ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಬಿಎಸ್‌ವೈ ಅಭಿಮಾನಿ

ಬೆಂಗಳೂರು(ಜು.27): ಕಳೆದ ಕೆಲ ಸಮಯದಿಂದ ಕೇಳಿ ಬಂದಿದ್ದ ಎಲ್ಲಾ ಗೊಂದಲಗಳಿಗೂ ಬಿ. ಎಸ್‌. ಯಡಿಯೂರಪ್ಪನವರ ರಾಜೀನಾಮೆ ತೆರೆ ಎಳೆದಿದೆ. ಬಿಎಸ್‌ವೈ ರಾಜೀನಾಮೆ ಒಂದೆಡೆ ಅವರ ವಿರೋಧಿ ಬಣವನ್ನು ಸಂತಸಕ್ಕೀಡು ಮಾಡಿದ್ದರೆ, ವಿರೋಧ ಪಕ್ಷಗಳಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುವಂತೆ ಮಾಡಿದೆ. ಆದರೆ ಇವೆಲ್ಲದರ ನಡುವೆ ಬಿಎಸ್‌ವೈ ಅಭಿಮಾನಿಗಳು ಮಾತ್ರ ಆಘಾತಕ್ಕೊಳಗಾಗಿದ್ದಾರೆ. ಅತ್ತ ಬಿಎಸ್‌ವೈ ತವರು ಕ್ಷೇತ್ರ ಶಿಕಾರಿಪುರದಲ್ಲಿ ನೀರವ ಮೌನ ಮನೆ ಮಾಡಿದೆ.

ಇನ್ನು ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ವಿರುದ್ಧ ಗುಡುಗಿದ್ದ ದಿಂಗಾಲೇಶ್ವರ ಸ್ವಾಮೀಜಿಗಳು ಬಿಎಸ್‌ವೈ ಕಣ್ಣೀರಿನಿಂದ ಕಮಲ ಪಾಳಯ ಕೊಚ್ಚಿ ಹೋಗುತ್ತದೆ ಎಂದು ಭವಿಷ್ಯ ನಡಿದಿದ್ದರು. ಆದರೀಗ ತಮ್ಮ ನೆಚ್ಚಿನ ನಾಯಕ ಪದತ್ಯಾಗ ಮಾಡಿದ ಬೆನ್ನಲ್ಲೇ ಗುಂಡ್ಲುಪೇಟೆಯ ಅವರ ಬೆಂಬಲಿಗರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿರುವ ಬಿ. ಎಸ್. ಯಡಿಯೂರಪ್ಪ ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದಿದ್ದಾರೆ.

ಅಲ್ಲದೇ ಅಭಿಮಾನಿಗಳಿಗೂ ಕಿವಿಮಾತು ಹೇಳಿರುವ ಬಿಎಸ್‌ವೈ ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದೂ ಮನವಿ ಮಾಡಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ