* ಗಣೇಶ ಚತುರ್ಥಿಯ ಬಳಿಕ ಎಲ್ಲ ಜಿಲ್ಲೆಗಳಿಗೂ ಪ್ರವಾಸ: ಬಿಎಸ್‌ವೈ
* ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುವೆ
ಬೆಂಗಳೂರು(ಜು.30): ತಮಗೆ ರಾಜ್ಯಪಾಲ ಹುದ್ದೆ ಬೇಡ, ಸಕ್ರಿಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಮೊದಲು ಹೇಳಿದ್ದ ಬಿ.ಎಸ್.ಯಡಿಯೂರಪ್ಪ ಅವರು ಇದೀಗ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ.
‘ಬರುವ ಗಣೇಶ ಚತುರ್ಥಿ ಹಬ್ಬದ ಬಳಿಕ ನಾನು ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುತ್ತೇನೆ’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಬೊಮ್ಮಾಯಿ ಸಿಎಂ ಆದ್ರೆ ಕಿಂಗ್ ಮೇಕರ್ BSY : ಯಡಿಯೂರಪ್ಪ ನಿವಾಸಕ್ಕೆ ಶಾಸಕರ ಟೀಂ
ಗುರುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ, ಸ್ಥಾನಮಾನ ಇಲ್ಲದೆಯೂ ಒಳ್ಳೆಯ ಕೆಲಸ ಮಾಡಲು ಸಾಧ್ಯವಿದೆ ಎಂಬುದನ್ನು ನಿರೂಪಿಸಬೇಕು ಎಂಬ ಉದ್ದೇಶವಿದೆ ಎಂದು ಹೇಳಿದರು.
'ಭ್ರಷ್ಟಾಚಾರದ ಕಾರಣಕ್ಕೆ ಬಿಎಸ್‌ವೈರನ್ನ ಸಿಎಂ ಸ್ಥಾನದಿಂದ ಬದಲಿಸಲಾಗಿದೆಯಾ?'
ಹಬ್ಬದ ನಂತರ ಪ್ರತಿ ವಾರ ಜಿಲ್ಲೆಯೊಂದಕ್ಕೆ ಭೇಟಿ ನೀಡುತ್ತೇನೆ. ಅಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತೇನೆ. ಪಕ್ಷದ ಸಂಘಟನೆ ಎಲ್ಲೆಲ್ಲಿ ದುರ್ಬಲವಾಗಿದೆಯೊ ಅಲ್ಲಿ ಸಂಘಟನೆ ಬಲಪಡಿಸಲು ಪ್ರಯತ್ನಿಸುತ್ತೇನೆ. ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಯೋಗ್ಯ ಅಭ್ಯರ್ಥಿಯನ್ನು ಈಗಲೇ ಗುರುತಿಸುವ ಮೂಲಕ 140 ಸ್ಥಾನಗಳನ್ನು ಪಡೆದು ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುವೆ ಎಂದರು.