Tomato Price Drop: ಈರುಳ್ಳಿ ಕಣ್ಣೀರು ತರಿಸಿದ್ದಾಯ್ತು, ಈಗ ಏಕಾಏಕಿ ಟೊಮೆಟೋ ಬೆಲೆ ಕುಸಿತ, ಕೇಜಿಗೆ ₹10, ರೈತರು ಕಂಗಾಲು

Kannadaprabha News, Ravi Janekal |   | Kannada Prabha
Published : Sep 15, 2025, 07:11 AM IST
tomato prices have also fallen to just Rs 10 per

ಸಾರಾಂಶ

ಬೆಳಗಾವಿಯಲ್ಲಿ ಟೊಮೆಟೊ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ₹30-₹40ಕ್ಕೆ ಮಾರಾಟವಾಗುತ್ತಿದ್ದ ಟೊಮೆಟೊ ಈಗ ₹10-₹15ಕ್ಕೆ ಮಾರಾಟವಾಗುತ್ತಿದೆ. ಹೆಚ್ಚಿನ ಉತ್ಪಾದನೆ ಮತ್ತು ಬೇಡಿಕೆ ಕುಸಿತದಿಂದಾಗಿ ಬೆಲೆ ಕುಸಿತ ಕಂಡುಬಂದಿದೆ.

 ಬೆಳಗಾವಿ (ಸೆ.15): ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಎಂದೇ ಪ್ರಸಿದ್ಧಿ ಪಡೆದಿರುವ ಟೊಮೆಟೋ ಬೆಲೆ ಕುಸಿತದಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರಿ ಬೇಡಿಕೆಯಲ್ಲಿದ್ದ ಟೊಮೆಟೋ ಬೆಳೆಯನ್ನು ಹೆಚ್ಚಿನ ರೈತರು ಬೆಳೆದಿದ್ದಾರೆ. ಆದರೆ ನಿರೀಕ್ಷಿತ ಬೆಲೆ ಸಿಗದೇ ಅನ್ನದಾತರಿಗೆ ದಿಕ್ಕು ತೋಚದಂತಾಗಿದೆ.

ಪ್ರತಿ ಕೆ.ಜಿಗೆ ₹30 ರಿಂದ ₹40ಗೆ ಮಾರಾಟವಾಗುತ್ತಿದ್ದ ಟೊಮೆಟೋ ಪ್ರಸ್ತುತ ಒಂದು ಕೇಜಿಗೆ ₹10 ರಿಂದ ₹15ಕ್ಕೆ ಮಾರಾಟವಾಗುತ್ತಿದ್ದು, 15 ಕೇಜಿಯ ಒಂದು ಬಾಕ್ಸ್‌ಗೆ ₹100 ರಿಂದ ₹200ಗೆ ಮಾರಾಟವಾಗುತ್ತಿದೆ.

ಬೆಲೆ ಕುಸಿತಕ್ಕೆ ಕಾರಣವೇನು?:

ಪೂರ್ವ ಮುಂಗಾರು ಮಳೆಯ ಪರಿಣಾಮ ಕಳೆದ ವಾರದಿಂದ ಬೆಲೆಗಳು ಕುಸಿಯಲು ಪ್ರಾರಂಭಿಸಿದೆ. ಈ ಬಾರಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಹೆಚ್ಚು ರೈತರು ಟೊಮೆಟೋ ಬೆಳೆದಿದ್ದಾರೆ. ಜತೆಗೆ, ಬಿಸಿಲ ವಾತಾವರಣದಿಂದಾಗಿ ಕಾಯಿಗಳು ಬೇಗ ಹಣ್ಣಾಗುತ್ತವೆ. ಅಲ್ಲದೆ, ಹೊರರಾಜ್ಯಗಳಲ್ಲೂ ಟೊಮೆಟೋ ಹೆಚ್ಚಾಗಿ ಬೆಳೆದಿರುವುದರಿಂದ ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಹಣ್ಣು ರವಾನೆಯಾಗುತ್ತಿಲ್ಲ. ಹೀಗಾಗಿ, ಮಾರುಕಟ್ಟೆಗೆ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದು, ಬೇಡಿಕೆಯಿಲ್ಲದೆ ಬೆಲೆಗಳು ಕುಸಿದಿವೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!