ಕಳೆದ ವಾರವಷ್ಟೇ ಅಬ್ರಹಾಂ ಅವರು ರಾಜ್ಯಪಾಲರ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿದ್ದರು. ಆದರೆ, ರಾಜ್ಯಪಾಲರು ಇದುವರೆಗೆ ಅನುಮತಿ ನೀಡಿರಲಿಲ್ಲ. ಈ ನಡುವೆ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ದೂರು ನೀಡುವ ಜತೆಗೆ ನ್ಯಾಯಾಲಯದಲ್ಲೂ ಖಾಸಗಿ ದೂರು ದಾಖಲಿಸಿದ್ದರು. ಇದೀಗ ಅದರ ಬೆನ್ನಲ್ಲೇ ಅಬ್ರಹಾಂ ಅವರೂ ದೂರು ದಾಖಲಿಸಿದ್ದಾರೆ.
ಬೆಂಗಳೂರು(ಆ.13): ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇದೀಗ ಮತ್ತೊಂದು ದೂರು ದಾಖಲಾಗಿದೆ. ಸೋಮವಾರ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ಖಾಸಗಿ ದೂರು ದಾಖಲಿಸಿದ್ದಾರೆ.
ಕಳೆದ ವಾರವಷ್ಟೇ ಅಬ್ರಹಾಂ ಅವರು ರಾಜ್ಯಪಾಲರ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿದ್ದರು. ಆದರೆ, ರಾಜ್ಯಪಾಲರು ಇದುವರೆಗೆ ಅನುಮತಿ ನೀಡಿರಲಿಲ್ಲ. ಈ ನಡುವೆ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ದೂರು ನೀಡುವ ಜತೆಗೆ ನ್ಯಾಯಾಲಯದಲ್ಲೂ ಖಾಸಗಿ ದೂರು ದಾಖಲಿಸಿದ್ದರು. ಇದೀಗ ಅದರ ಬೆನ್ನಲ್ಲೇ ಅಬ್ರಹಾಂ ಅವರೂ ದೂರು ದಾಖಲಿಸಿದ್ದಾರೆ.
ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಆಗಲಿ ಪಿಎಂ ಆಗಲಿ ಶಿಕ್ಷೆ ಆಗಲಿ: ಎಂಟಿಬಿ ನಾಗರಾಜ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗಾಗಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಅಭಿಯೋಜನೆ ದೊರಕಿದ ಕೂಡಲೇ ಅದರ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಖಾಸಗಿ ದೂರಿನಲ್ಲಿ ತಿಳಿಸಲಾಗಿದೆ.