ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ: ಪ್ರಲ್ಹಾದ್ ಜೋಶಿ

By Kannadaprabha NewsFirst Published May 16, 2024, 9:36 AM IST
Highlights

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಬ್ಬ ಯುವತಿಯ ಕೊಲೆಯೇ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ (ಮೇ.16) : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಬ್ಬ ಯುವತಿಯ ಕೊಲೆಯೇ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೇಲಿಂದ ಮೇಲೆ ಇಂಥ ಘಟನೆಗಳು ನಡೆಯುತ್ತಿರುವುದು ವಿಷಾದಕರ. ಈಗಿನ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಪರಾಧ ಹಾಗೂ ಕೊಲೆ ಸುಲಿಗೆ ಮಾಡುವ ಪಾತಕಿಗಳಿಗೆ ಕಾನೂನಿನ, ಪೊಲೀಸರ ಭಯವೇ ಇಲ್ಲದಂತಾಗಿದೆ. ಭಂಡ ಧೈರ್ಯದಿಂದ ಈ ತರಹದ ಘಟನೆಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

Latest Videos

ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!

ರಾಜ್ಯ ಸರ್ಕಾರ ಕೂಡಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ. ನೇಹಾ ಹಿರೇಮಠ ಹತ್ಯೆ ಮಾಸುವ ಮುನ್ನವೇ ಈ ಘಟನೆ ನಡೆದಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತ ಪ್ರಕರಣವಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಂಜಲಿ ಹಂತಕನ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

ಇಲ್ಲಿನ ವೀರಾಪುರ ಓಣಿಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಬರ್ಬರವಾಗಿ ಹತ್ಯೆಯಾದ ಅಂಜಲಿ(Anjali murder case) ಹಂತಕನಿಗೆ ಗಲ್ಲು ಶಿಕ್ಷೆ ನೀಡಬೇಕು, ಇಲ್ಲವಾದಲ್ಲಿ ನಮಗೆ ಹಸ್ತಾಂತರಿಸಿ ನಾವೇ ಶಿಕ್ಷೆ ನೀಡುತ್ತೇವೆ ಎಂದು ಆಗ್ರಹಿಸಿ ಸಾರ್ವಜನಿಕರು ನಗರದ ಚೆನ್ನಮ್ಮ ವೃತ್ತ ಹಾಗೂ ವೀರಾಪುರ ಓಣಿಯಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧವೂ ಈ ವೇಳೆ ಪ್ರತಿಭಟನಾಕಾರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಕಿಮ್ಸ್‌(Hubballi KIMS) ಶವಾಗಾರದಿಂದ ಅಂಜಲಿ ಮೃತದೇಹವನ್ನು ಅವರ ಕುಟುಂಬದರಿಗೆ ಹಸ್ತಾಂತರಿಸುತ್ತಿದ್ದಂತೆ ಕೊಲೆ ಪ್ರಕರಣ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಚೆನ್ನಮ್ಮ ಸರ್ಕಲ್‌ನಲ್ಲಿ ರಸ್ತೆ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು. ನಂತರ ಶವ ಹೊತ್ತ ಆ್ಯಂಬುಲೆನ್ಸ್‌ ಚೆನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಅಲ್ಲಿಯೇ ಶವ ಇಟ್ಟು ಅಂಜಲಿ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

Hubli: ಮಗಳು ನೇಹಾ ಕಳ್ಕೊಂಡ ನೋವಿನಲ್ಲಿಯೇ, ಅಂಜಲಿ ಕುಟುಂಬಕ್ಕೆ 1 ಲಕ್ಷ ರೂ. ನೆರವು ಕೊಟ್ಟ ನಿರಂಜನ ಹಿರೇಮಠ 

ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಇಲ್ಲವೇ ತಮಗೆ ಹಸ್ತಾಂತರಿಸಿ ನಾವೇ ಶಿಕ್ಷೆ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಗೃಹ ಸಚಿವರು ಹಾಗೂ ಪೊಲೀಸ್‌ ಇಲಾಖೆ ವಿರುದ್ಧ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸದರು.

click me!