
ಚಿಕ್ಕಬಳ್ಳಾಪುರ[ಜ.25]: ಮಹಾಭಾರತದಲ್ಲಿನ ಶಕುನಿಯ ಕುತಂತ್ರದ ಮಾದರಿಯಲ್ಲಿಯೇ ನಡೆದ ಕುತಂತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಲಬೇಕಾಯಿತು ಎಂಬ ಗುಮಾನಿ ಇದೆ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ನಗರದ ಹೊರವಲಯದಲ್ಲಿ ಗುರುವಾರ ಆಯೋಜಿಸಿದ್ದ ಕನಕ ಜಯಂತಿಯಲ್ಲಿ ಮಾತನಾಡಿದ ಅವರು, ಮೋಸದ ಪಗಡೆಯಿಂದ ಧರ್ಮರಾಯ ಸೋತ ರೀತಿಯಲ್ಲಿಯೇ ಧರ್ಮರಾಯರಂತಹ ಸಿದ್ದರಾಮಯ್ಯ ಅವರೂ ಸೋಲನುಭವಿಸಿದ್ದಾರೆ. ಅವರು ಧರ್ಮಯುದ್ಧದಲ್ಲಿ ಮತ್ತೆ ಗೆದ್ದು ರಾಜ್ಯದ ಮುಖ್ಯಮಂತ್ರಿಯಾಗಲಿದ್ದು, ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರು ಯಾವುದೇ ಜಾತಿಯ ವಿರೋಧಿಯಲ್ಲ. ಅವರು ಒಕ್ಕಲಿಗರ ವಿರೋಧಿಯಾಗಿದ್ದರೆ ಕೆಂಪೇಗೌಡ ಜಯಂತಿಯನ್ನು ಘೋಷಣೆ ಮಾಡುತ್ತಿರಲಿಲ್ಲ ಎಂಬುದನ್ನು ಅರಿಯಬೇಕು. ಎಲ್ಲ ವರ್ಗದ ಜನರಿಗೂ ಸಮಾನವಾಗಿ ಯೋಜನೆಗಳನ್ನು ರೂಪಿಸುವ ಮೂಲಕ ಇಡೀ ದೇಶದಲ್ಲಿಯೇ ಮಾದರಿ ಆಡಳಿತ ನಡೆಸಿದ ವ್ಯಕ್ತಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ಶತಃಸಿದ್ಧ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ