
ಬೆಂಗಳೂರು (ಮಾ.01): ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರು ಭಾರತೀಯ ನಾಗರೀಕ ಸೇವೆ (ಐಎಎಸ್) ಅಧಿಕಾರಿ ಆಗಿರುವ ರೋಹಿಣಿ ಸಿಂಧೂರಿ ಅವರ ವಿರುದ್ಧ ಮಾಡಿದ್ದ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮದ ಕುರಿತ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದೆ. ಈ ಮೂಲಕ ಐಪಿಎಸ್ ಅಧಿಕಾರಿ ಈಗಾಗಲೇ 19 ಅಂಶಗಳ ಆರೋಪಗಳನ್ನು ಮಾಡಿದ್ದು, ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ರೋಹಿಣಿ ಸಿಂಧೂರಿ ವಿರುದ್ಧ ಸರ್ಕಾರಕ್ಕೆ ತನಿಖಾ ವರದಿಯೊಂದು ಸಲ್ಲಿಕೆಯಾಗಿದ್ದು, ಸರ್ಕಾರದ ನಿಯಮ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಎಸಗಿದ ಅಕ್ರಮವೊಂದರ ಕುರಿತು ವರದಿ ಇದಾಗಿದ್ದು, ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಎತ್ತಿದ್ದ ಅಕ್ರಮದ ಕುರಿತು ಕೊನೆಗೂ ವರದಿ ಸಲ್ಲಿಕೆ ಆಗಿದೆ. ಈ ವರದಿಯನ್ನು ಸರ್ಕಾರ ಜಾರಿ ಮಾಡಿದರೆ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಸ್ತು ಕ್ರಮ ಆಗುವುದು ಖಚಿತವಾಗಿದೆ.
IAS vs IPS: ಡಿ. ರೂಪಾ ಮತ್ತೊಂದು ಸಂಕಷ್ಟ: ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿದ ರೋಹಿಣಿ ಸಿಂಧೂರಿ
ವರದಿ ಸಲ್ಲಿಸಿದ ವಸತಿ ಇಲಾಖೆ ಕಾರ್ಯದರ್ಶಿ ಜೆ. ರವಿಶಂಕರ್: ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ 14,71,458 ಬಟ್ಟೆ ಬ್ಯಾಗ್ ಗಳನ್ನು ಖರೀದಿಸಲು ನಿಯಮ ಉಲ್ಲಂಘಿಸಿ ಆದೇಶ ಕೊಟ್ಟಿರುವ ಕುರಿತು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರಿಂದ ಗಂಭೀರ ಸ್ವರೂಪದ ದೂರ ಸಲ್ಲಿಕೆ ಆಗಿತ್ತು. ಅವರ ದೂರಿನ ಹಿನ್ನೆಲೆಯಲ್ಲಿ ತನಿಖೆ ಮಾಡಿದ ಹಿರಿಯ ಐಎಎಸ್ ಅಧಿಕಾರಿ ಜೆ. ರವಿಶಂಕರ್ ಅವರು, ಸುಧೀರ್ಘ ವಿಚಾರಣೆ ಬಳಿಕ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ವರದಿ ಸಿದ್ಧಪಡಿಸಲು ನೇಮಕ ಆಗಿದ್ದ ವೇಳೆ ಡಿಪಿಎಆರ್ ಅಧಿಕಾರಿ ಆಗಿದ್ದ ಜೆ. ರವಿಶಂಕರ್ ಈಗ ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿಯಲ್ಲಿ ಪ್ರಸ್ತಾಪವಾಗಿರುವ ಪ್ರಮುಖ ವಿವರಗಳು:
'ಡಿಕೆ ರವಿ ಕೊನೆಯ ಮೆಸೇಜ್ ಆಧರಿಸಿ ರೋಹಿಣಿ ವಿರುದ್ಧ ತನಿಖೆ ಮಾಡಿ'
ರಾಜ್ಯ ಸರ್ಕಾರಕ್ಕೆ ಈಗಾಗಲೇ ತನಿಖಾ ವರದಿ ಸಲ್ಲಿಕೆ ಆಗಿದ್ದು, ವರದಿಯನ್ನು ಜಾರಿಗೆ ತಂದಲ್ಲಿ ಅಕ್ರಮ ಎಲ್ಲಿ ನಡೆದಿದೆ ಎನ್ನುವುದು ಪೂರ್ಣವಾಗಿ ತಿಳಿಯಲಿದೆ. ಇನ್ನು ಭಾರತೀಯ ಸಿವಿಲ್ ಸರ್ವಿಸ್ ನಿಯಮಾವಳಿ ಅನ್ವಯ ನಿಯಮ ಉಲ್ಲಂಘನೆ ವಿಧಿಸಲಾಗುವ ಶಿಕ್ಷೆ ರೋಹಿಣಿ ಸಿಂಧೂರಿ ಅವರ ಮೇಲೆ ವಿಧಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ