
ಮಣಿಪಾಲ (ಜು.13) : ಭಾರತೀಯ ಸೇನೆಯ ಅಗ್ನಿ ಪಥ್ ಸೇನಾ ನೇಮಕಾತಿ ರಾರಯಲಿ ಜು.17ರಿಂದ 25ರ ತನಕ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ವರೆಗೆ 11 ಜಿಲ್ಲೆಗಳಿಂದ 6,800 ಅಧಿಕ ಮಂದಿ ಯುವಕರು ಹೆಸರು ನೋಂದಣಿ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದ್ದಾರೆ.
ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ರಾರಯಲಿಯ ಪೂರ್ವಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾರಯಲಿಗೆ ಈಗಾಗಲೇ ಆನ್‌ಲೈನ್ ಮೂಲಕ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದಾರೆ. ಪ್ರತಿದಿನ 1000 ಮಂದಿ ನೇಮಕಾತಿ ಪರೀಕ್ಷೆಗೆ ಆಗಮಿಸಲಿದ್ದು, ಅವರಿಗೆ ಕುಡಿಯುವ ನೀರು, ಸಾಕಷ್ಟುಸಂಖ್ಯೆಯ ಮೊಬೈಲ್ ಟಾಯ್ಲೆಟ್ ಮತ್ತಿತರ ಮೂಲಭೂತ ಸೌಕರ್ಯ ಒದಗಿಸಿ, ಕ್ರೀಡಾಂಗಣದ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
NABARD: ಪಿಎಂ ಸ್ವನಿಧಿ ಯೋಜನೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ
ಅಭ್ಯರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗದಂತೆ, ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ಮತ್ತು ರಾತ್ರಿ ವೇಳೆಯಲ್ಲಿ ಅಭ್ಯರ್ಥಿಗಳು ರಸ್ತೆ ಬದಿಗಳಲ್ಲಿ ಮಲಗದಂತೆ, ಕ್ರೀಡಾಂಗಣ ಸುತ್ತಮುತ್ತ ಅಗತ್ಯ ಭದ್ರತಾ ವ್ಯವಸ್ಥೆ ಒದಗಿಸುವಂತೆ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಡಿವೈಎಸ್ಪಿ ಸಿದ್ಧಲಿಂಗಪ್ಪ, ನಗರಸಭೆಯ ಪೌರಾಯುಕ್ತ ರಾಯಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿಮತ್ತಿತರರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ