ಖರ್ಗೆ ಆರೋಗ್ಯ ಚೇತರಿಕೆ, ಮತ್ತೆ ರಾಜಕಾರಣದಲ್ಲಿ ಸಕ್ರಿಯ!

Kannadaprabha News, Ravi Janekal |   | Kannada Prabha
Published : Oct 10, 2025, 06:57 AM IST
Mallikarjun Kharge political return

ಸಾರಾಂಶ

ಪೇಸ್‌ಮೇಕರ್‌ ಅಳವಡಿಕೆ ಬಳಿಕ ವಿಶ್ರಾಂತಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೆ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆಯಂತಹ ಮಹತ್ವದ ಬೆಳವಣಿಗೆಗಳ ನಡುವೆಯೇ ಅವರು ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

 ಬೆಂಗಳೂರು (ಅ.10): ಪೇಸ್‌ಮೇಕರ್‌ ಅಳವಡಿಸಿದ್ದಕ್ಕಾಗಿ ವಿಶ್ರಾಂತಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೆ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ. ಗುರುವಾರ ಮಧ್ಯಾಹ್ನ ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಸದ್ದು, ಮುಖ್ಯಮಂತ್ರಿಗಳ ಔತಣಕೂಟಕ್ಕೆ ಸಚಿವರಿಗೆ ಆಹ್ವಾನದ ಬೆಳವಣಿಗೆ ನಡುವೆಯೇ ಖರ್ಗೆ ಅವರು ದೆಹಲಿಗೆ ಭೇಟಿ ನೀಡಿದ್ದಾರೆ.

ಪೇಸ್‌ಮೇಕರ್‌ ಅಳವಡಿಕೆ ಬಳಿಕ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿಯೇ ಖರ್ಗೆ ಅವರು ವಿಶ್ರಾಂತಿಯಲ್ಲಿದ್ದರು. ಈ ವೇಳೆ ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲದೇ ಕೇವಲ ಆರೋಗ್ಯ ವಿಚಾರಿಸುವವರನ್ನು ಭೇಟಿಯಾಗುತ್ತಿದ್ದರು. ಸಿಜೆಐ ಗವಾಯಿ ಅವರಿಗೆ ಶೂ ಎಸೆದಿದ್ದ ಬಗ್ಗೆ ಬುಧವಾರ ಮಾತನಾಡಿದ್ದ ಖರ್ಗೆ ಅವರು, ಅಂದೇ ಬಿಹಾರ ಸೀಟು ಹಂಚಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: CJI ಮೇಲೆ ಶೂ ಎಸೆದವನ ವಿರುದ್ಧ ಕ್ರಮವಾಗಲಿ: ಖರ್ಗೆ ವಾಗ್ದಾಳಿ

ಗುರುವಾರ ಪೂರ್ಣ ಪ್ರಮಾಣದಲ್ಲಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯದಲ್ಲಿ ಸಂಪುಟ ಪುನರ್‌ರಚನೆ, ಸಚಿವರ ಔತಣಕೂಟ, ಎಸ್ಸಿ-ಎಸ್ಟಿ ಸಚಿವರ ರಹಸ್ಯ ಸಭೆ ಸೇರಿದಂತೆ ಸಾಲ ಸಾಲು ಬೆಳವಣಿಗೆ ನಡುವೆ ದೆಹಲಿಗೆ ತೆರಳಿದ್ದಾರೆ.

- ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ಭಾಗಿ

- ಹಲವು ಮಹತ್ವದ ಬೆಳವಣಿಗೆ ನಡುವೆ ಭೇಟಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ