ಮುಸ್ಲಿಮರು ಮಸೂದೆಯಲ್ಲಿ ತಿದ್ದುಪಡಿ ಬಯಸದಿದ್ದರೆ ಅದನ್ನು ಬದಿಗಿರಿಸಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಶನಿವಾರ ಹೇಳಿದೆ.
ವಕ್ಫ್ ತಿದ್ದುಪಡಿ ಮಸೂದೆ: ಮುಸ್ಲಿಮರು ಮಸೂದೆಯಲ್ಲಿ ತಿದ್ದುಪಡಿ ಬಯಸದಿದ್ದರೆ ಅದನ್ನು ಬದಿಗಿರಿಸಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಶನಿವಾರ ಹೇಳಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಎಂಪಿಬಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಮೊಹಮ್ಮದ್ ಫಜಲುರಹೀಂ ಮುಜಾದಿದಿ, ಕೇವಲ 13 ದಿನಗಳಲ್ಲಿ 3.66 ಕೋಟಿಗೂ ಹೆಚ್ಚು ಮುಸ್ಲಿಮರು ಇಮೇಲ್ ಮೂಲಕ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವಾಗ ಮುಸ್ಲಿಮರು ಈ ಮಸೂದೆಯನ್ನು ಬಯಸುವುದಿಲ್ಲವೋ ಆಗ ಸರ್ಕಾರ ಅದನ್ನು ನಿರ್ಲಕ್ಷಿಸಬೇಕು ಎಂದಿದೆ.
undefined
ರೈತರ ಜಮೀನನ್ನ ಯಾವುದೇ ಕಾರಣಕ್ಕೂ ತೆಗೆದುಕೊಳ್ಳಲ್ಲ: ಸಚಿವ ಜಮೀರ್ ಅಹ್ಮದ್ ಖಾನ್
ಈ ಹಿಂದೆ ವಕ್ಫ್ ಮಂಡಳಿಗೆ ತಂದ ಎಲ್ಲಾ ತಿದ್ದುಪಡಿಗಳು ಅದನ್ನು ಬಲಪಡಿಸುವ ಗುರಿಯನ್ನು ಹೊಂದಿದ್ದವು. ಆದರೆ ಪ್ರಸ್ತುತ ಮಸೂದೆಯು ವಕ್ಫ್ ಮಂಡಳಿಯನ್ನು ದುರ್ಬಲಗೊಳಿಸುತ್ತದೆ ಎಂದು ನಮಗೆ ತಿಳಿದಿದೆ. ಎಐಎಂಪಿಬಿ ಈ ತಿದ್ದುಪಡಿಗಳನ್ನು ಒಪ್ಪಿಕೊಳ್ಳದಿರಲು ಇದು ಕಾರಣವಾಗಿದೆ. ಈ ವಿಷಯವನ್ನು ಕಾನೂನಾತ್ಮಕವಾಗಿ ಹೇಗೆ ನಿಭಾಯಿಸಬೇಕು ಎಂಬುದನ್ನು ಸಹ ಅವರೇ ನಿರ್ಧರಿಸುತ್ತಾರೆ. ಈ ಸಮಸ್ಯೆಯನ್ನು ಪರಿಹರಿಸಬೇಕು ಮತ್ತು ಮುಸ್ಲಿಮರು ಏನು ಬಯಸುತ್ತಾರೆ ಎಂಬುದನ್ನು ಪರಿಗಣಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ.
ನ. 23-24 ರಂದು AIMPLB ಸಮ್ಮೇಳನ:
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ 29ನೇ ಸಮ್ಮೇಳನವು ನವೆಂಬರ್ 23-24 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಇದರಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಚರ್ಚೆಯ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.
ವಕ್ಫ್ ಜಮೀನು ವಿಚಾರವಾಗಿ ರೈತರಿಗೆ ಕಳುಹಿಸಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣವೇ ಹಿಂಪಡೆಯುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈತರಿಗೆ ಯಾವುದೇ ತೊಂದರೆಯಾಗಬಾರದು. ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಬಳಿಕ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದರು.
ಜಮೀರ್ ಅಹಮದ್ ಖಾನ್ ಒಬ್ಬ ಮತಾಂಧ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಇದೇ ವೇಳೆ ಕರ್ನಾಟಕ ಬಿಜೆಪಿ ವಕ್ಫ್ ಬೋರ್ಡ್ ವಿರೋಧಿಸಿ ನವೆಂಬರ್ 4 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಚಿವ ಜಮೀರ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ವಕ್ಫ್ ನ್ಯಾಯಾಲಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.