ಬೆಂಗ್ಳೂರು ಏರ್‌ಪೋರ್ಟ್‌ ಟಿ-2 ವಿಶ್ವದಲ್ಲೇ ಸುಂದರ..!

Published : Dec 22, 2023, 04:19 AM IST
ಬೆಂಗ್ಳೂರು ಏರ್‌ಪೋರ್ಟ್‌ ಟಿ-2 ವಿಶ್ವದಲ್ಲೇ ಸುಂದರ..!

ಸಾರಾಂಶ

ವಿಶೇಷವೆಂದರೆ ಈ ಗೌರವಕ್ಕೆ ಪಾತ್ರವಾದ ಮೊದಲ ನಿಲ್ದಾಣ ಎಂಬ ಹಿರಿಮೆಗೆ ಬೆಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ. ಒಳಾಂಗಣ ವಿನ್ಯಾಸಕ್ಕಾಗಿ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌- 2ಕ್ಕೆ ಈ ಗೌರವ ಸಂದಿದೆ.

ಬೆಂಗಳೂರು(ಡಿ.22):  ನಗರದ ‘ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಟರ್ಮಿನಲ್‌-2, ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಹಿರಿಮೆಗೆ ಪಾತ್ರವಾಗಿದೆ. ಈ ಮೂಲಕ ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋ ನೀಡುವ ಪ್ರಿಕ್ಸ್‌ ವರ್ಸೈಲ್ಸ್‌ ಗೌರವಕ್ಕೆ ಪಾತ್ರವಾಗಿದೆ.

ವಿಶೇಷವೆಂದರೆ ಈ ಗೌರವಕ್ಕೆ ಪಾತ್ರವಾದ ಮೊದಲ ನಿಲ್ದಾಣ ಎಂಬ ಹಿರಿಮೆಗೆ ಬೆಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ. ಒಳಾಂಗಣ ವಿನ್ಯಾಸಕ್ಕಾಗಿ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌- 2ಕ್ಕೆ ಈ ಗೌರವ ಸಂದಿದೆ.

ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಕೆಂಪೇಗೌಡ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌!

ಟರ್ಮಿನಲ್‌-2 ವಿಶೇಷತೆ ಏನು?:

2,55,661 ಚದರ ಮೀಟರ್‌ ವಿಸ್ತೀರ್ಣದಲ್ಲಿರುವ ಟರ್ಮಿನಲ್‌-2 ಅನ್ನು 4 ಬೃಹತ್‌ ಅಡಿಪಾಯದ ಕಂಬಗಳ ಮೇಲೆ ನಿರ್ಮಾಣವಾಗಿದೆ. ಇಲ್ಲಿನ ಉದ್ಯಾನ ಬಹು ಆಕರ್ಷಣೀಯವಾಗಿದ್ದು, ಇಲ್ಲಿ ಪರಿಸರ ಮತ್ತು ಕರ್ನಾಟಕದ ಶ್ರೀಮಂತ ಪರಂಪರೆ, ಸಂಸ್ಕೃತಿ, ಆಚರಣೆಗಳನ್ನು ಕಾಣಬಹುದಾಗಿದೆ. ಈ ಟರ್ಮಿನಲ್‌-2ನ ಮೊದಲ ಹಂತವು ನ.11, 2022ರಂದು ಉದ್ಘಾಟನೆಯಾಗಿದೆ. ಇದು ವರ್ಷಕ್ಕೆ 2.5 ಕೋಟಿ ಪ್ರಯಾಣಿಕರನ್ನು ನಿರ್ವಹಿಸುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!