
ಬೆಂಗಳೂರು : ನಗರದ ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ನಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸರ್ಕಾರಿ ಶಾಲಾ ಹೆಣ್ಣು ಮಕ್ಕಳಿಗೆ ‘ಐಸಿರಿ ಸಮೃದ್ಧಿ’ ಯೋಜನೆ ಪರಿಚಯಿಸಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಆರ್. ವೆಂಕಟೇಶ್, ಸುಕನ್ಯ ಸಮೃದ್ಧಿ ಯೋಜನೆ ಮಾದರಿಯಲ್ಲಿರುವ ಐಸಿರಿ ಸಮೃದ್ಧಿ ಯೋಜನೆಯಡಿ ಪ್ರಾರಂಭಿಕವಾಗಿ ಪ್ರಾಯೋಜಕರಿಂದ 500 ರು.ಯೊಂದಿಗೆ ಆಯಾ ಶಾಲಾ ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಲಾಗುತ್ತದೆ. ನಂತರ ವಿದ್ಯಾರ್ಥಿ ಪಾಲಕರು ಖಾತೆಯನ್ನು ಮುಂದುವರೆಸಬೇಕು. ಆ ಮೊತ್ತದ ಮೇಲೆ ವಾರ್ಷಿಕ ಶೇ.8ರಷ್ಟು ಬಡ್ಡಿ ನೀಡಲಾಗುತ್ತದೆ. ಸತತ 5 ವರ್ಷಗಳ ಕಾಲ ವ್ಯವಹಾರ ನಡೆಸಿದರೆ ಅಂತಹ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಜಾಮೀನು ಇಲ್ಲದೇ 5 ಲಕ್ಷ ರು. ಸಾಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಹಕಾರ ಕ್ಷೇತ್ರದ ಕುರಿತು ಅರಿವು ಮೂಡಿಸಲು ಅಂತರ ಕಾಲೇಜು ರಸಪ್ರಶ್ನೆ ಕಾರ್ಯಕ್ರಮ, ಆಸಕ್ತ ವಿದ್ಯಾರ್ಥಿಗಳಿಗೆ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯುವುದು ಮತ್ತು ಎಟಿಎಂ ಕಾರ್ಡ್‌ಗಳನ್ನು ಕೂಡ ನೀಡಲಾಗುತ್ತದೆ. ನ.3ರಂದು ಜಯನಗರ 4ನೇ ಬ್ಲಾಕ್‌ನಲ್ಲಿರುವ ಬಿಇಎಸ್ ವಿದ್ಯಾಸಂಸ್ಥೆಯಲ್ಲಿ ನಡೆಯುವ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಶಾಸಕ ಎಸ್.ಟಿ ಸೋಮಶೇಖರ್ ಉದ್ಘಾಟಿಸುತ್ತಾರೆ. ನ.20ರಂದು ಎನ್.ಆರ್. ಕಾಲೋನಿಯ ಆಚಾರ್ಯ ಪಾಠಶಾಲಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ ನಡೆಸಲಾಗುತ್ತದೆ ಎಂದು ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ