ಅನಧಿಕೃತ ಮನೆಗಳ ಸಕ್ರಮ : ಮಾ.31ರವರೆಗೆ ವಿಸ್ತರಣೆ

Kannadaprabha News   | Asianet News
Published : Jun 08, 2021, 07:29 AM IST
ಅನಧಿಕೃತ ಮನೆಗಳ ಸಕ್ರಮ :  ಮಾ.31ರವರೆಗೆ ವಿಸ್ತರಣೆ

ಸಾರಾಂಶ

2015ರ ಜ.1ಕ್ಕಿಂತ ಮೊದಲು ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳ ಸಕ್ರಮ ಸಕ್ರಮಗೊಳಿಸುವ ಅವಕಾಶವನ್ನು 2022ರ ಮಾ.31ರವರೆಗೆ ವಿಸ್ತರಣೆ  ಕಂದಾಯ ಸಚಿವ ಆರ್‌. ಅಶೋಕ್‌ ಮಾಹಿತಿ

ಬೆಂಗಳೂರು (ಜೂ.08): ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015ರ ಜ.1ಕ್ಕಿಂತ ಮೊದಲು ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶವನ್ನು 2022ರ ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಅರ್ಜಿಗಳನ್ನ ಸ್ವೀಕರಿಸಲು 2019ರ ಮಾ.31ರವರೆಗೆ ಕಾಲಾವಕಾಶ ನಿಗದಿಪಡಿಲಾಗಿತ್ತು. 

ಅಕ್ರಮ ಸಾಗುವಳಿ ಸಕ್ರಮಕ್ಕೆ ಮತ್ತೆ ಅರ್ಜಿ ಆಹ್ವಾನ ...

ಸದ್ಯಕ್ಕೆ 2022ರ ಮಾ.31ರ ಕಾಲಾವಕಾಶ ನೀಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ನಂತರ ಫಲಾನುಭವಿಗಳಿಗೆ 2023ರ ಮಾ.31ರ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌