
ಬೆಂಗಳೂರು (ಅ.17): ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸರ್ಕಾರಿ ವಸತಿ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ. ರಾಯಚೂರು ವಿಶ್ವವಿದ್ಯಾನಿಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಅವರ ಗೌರವಾರ್ಥವಾಗಿ ಆಚರಿಸಲಾಗುವ ವಾಲ್ಮೀಕಿ ಜಯಂತಿಯಂದು ಅವರು ಈ ಘೋಷಣೆ ಮಾಡಿದ್ದಾರೆ. ಗುರುವಾರ ಬೆಳಗ್ಗೆ ಸಿಎಂ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಮಹರ್ಷಿ ವಾಲ್ಮೀಕಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ‘ಪ್ರತಿಭೆ ಎಂಬುದು ಜನ್ಮದ ವರವಲ್ಲ, ಸಾಧನೆ ಎಂಬುದನ್ನು ತೋರಿಸಿಕೊಟ್ಟ ರಾಮಾಯಣ ಮಹಾಕಾವ್ಯ ರಚಿಸಿದ ದಲಿತ ಮೇಧಾವಿ ಆದಿಕವಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ನಮಗೆಲ್ಲರಿಗೂ ಸ್ಫೂರ್ತಿಯಾಗಲಿ’ ಎಂದಿದ್ದಾರೆ.
ವಾಲ್ಮೀಕಿ ಜಯಂತಿ 2024: ಕವಿಕುಲ ಸಾರ್ವಭೌಮ ಮಹರ್ಷಿ ವಾಲ್ಮೀಕಿ
ವಿಧಾನಸೌಧದ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದ ಮುಖ್ಯಮಂತ್ರಿಗಳು. ಕಾರ್ಯಕ್ರಮದ ಚಿತ್ರಗಳನ್ನೂ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಹಲವು ರಾಜ್ಯಗಳಲ್ಲಿ ರಜೆ: ಮಹರ್ಷಿ ವಾಲ್ಮೀಕಿ ಜಯಂತಿಯಂದು ಉತ್ತರ ಪ್ರದೇಶದಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳು ಸಾರ್ವಜನಿಕ ರಜೆ ಘೋಷಿಸಿವೆ.
ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಐವರ ಹಿನ್ನೆಲೆ ಬಹಿರಂಗ: 5 ಲಕ್ಷ ರೂ. ನಗದು, 20 ಗ್ರಾಂ ಬಂಗಾರ!
ಮಹರ್ಷಿ ವಾಲ್ಮೀಕಿಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ