ಸಿಎಂ ಸರ್ವಪಕ್ಷ ಸಭೆ: ಸಚಿವ, ಸಂಸದ, ಶಾಸಕರ ಜತೆ ಸಿಎಂ ಮಾತುಕತೆ

Kannadaprabha News   | Asianet News
Published : Jun 26, 2020, 08:30 AM IST
ಸಿಎಂ ಸರ್ವಪಕ್ಷ ಸಭೆ: ಸಚಿವ, ಸಂಸದ, ಶಾಸಕರ ಜತೆ ಸಿಎಂ ಮಾತುಕತೆ

ಸಾರಾಂಶ

ರಾಜಧಾನಿ ಬೆಂಗಳೂರಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ನಗರ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಶುಕ್ರವಾರ ಕರೆದಿದ್ದಾರೆ.

ಬೆಂಗಳೂರು(ಜೂ.26): ರಾಜಧಾನಿ ಬೆಂಗಳೂರಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ನಗರ ವ್ಯಾಪ್ತಿಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಶುಕ್ರವಾರ ಕರೆದಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಎಲ್ಲ ಪಕ್ಷಗಳ ಬೆಂಗಳೂರಿನ ಎಲ್ಲಾ ಶಾಸಕರು, ಸಂಸದರು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಳೆಯಬ್ಬರಕ್ಕೆ ಉಕ್ಕಿದ ವೃಷಭಾವತಿ: ರಸ್ತೆ ಮೇಲೆ 5 ಅಡಿ ಎತ್ತರಕ್ಕೆ ಹರಿದ ನೀರು

ನಗರದಲ್ಲಿ ಕೋವಿಡ್‌-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ನ ಶಾಸಕರು, ಸಂಸದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.

ಒಂದೇ ದಿನ ರಾಜ್ಯದಲ್ಲಿ 442 ಹೊಸ ಸೋಂಕು, 519 ಜನ ಡಿಸ್ಚಾರ್ಜ್..!

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮಹಾಮಾರಿ ಕೊರೋನಾ ಸೋಂಕು ತಡೆಗಟ್ಟು ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿದ್ದೇನೆ. ಶುಕ್ರವಾರ ನಗರದ ಎಲ್ಲಾ ಪಕ್ಷದ ಶಾಸಕರು ಹಾಗೂ ಸಚಿವರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!