
ಬೆಂಗಳೂರು(ಆ.21): ರಾಜ್ಯದ ಜಲವಿವಾದಗಳು ಹಾಗೂ ಪ್ರಸ್ತುತ ಅಣೆಕಟ್ಟಿನ ಪರಿಸ್ಥಿತಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಬುಧವಾರ ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ, ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹ ಕುರಿತು ಚರ್ಚೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಳೆಯ ಅಭಾವದಿಂದಾಗಿ ರಾಜ್ಯದ ರೈತರು ಕಷ್ಟದಲ್ಲಿದ್ದಾರೆ. ಅವರ ಹಿತರಕ್ಷಣೆ ಕಾಯುವುದು ನಮ್ಮ ಆದ್ಯ ಕರ್ತವ್ಯ. ರಾಜ್ಯದ ಅಣೆಕಟ್ಟುಗಳಿಗೆ ನೀರಿನ ಹರಿವೂ ಕಡಿಮೆಯಾಗಿದ್ದು, ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಈ ವಿಚಾರವಾಗಿ ನಾವು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದೇವೆ. ಈ ಸಭೆಗೆ ಕೆಲವು ಸಂಸದರಿಗೂ ಆಹ್ವಾನ ನೀಡಲಾಗಿದೆ. ಕಾವೇರಿ, ಮಹದಾಯಿ, ಕೃಷ್ಣಾ ಮತ್ತಿತರ ಜಲವಿವಾದ, ರಾಜ್ಯದ ಅಣೆಕಟ್ಟೆಗಳಲ್ಲಿ ನೀರು ಪರಿಸ್ಥಿತಿಯ ಕುರಿತು ಚರ್ಚೆ ನಡೆಸಲಾಗುವುದು’ ಎಂದು ತಿಳಿಸಿದರು.
ಬಿಜೆಪಿ ಆಪರೇಷನ್ ಮಾಡಿದರೆ ಸರಿ, ನಾವು ಮಾಡಿದ್ರೆ ತಪ್ಪಾ? : ಡಿಕೆಶಿ ಪ್ರಶ್ನೆ
‘ರಾಜ್ಯದಿಂದ ಕಾನೂನು ಹೋರಾಟ ಹೇಗೆ ಮಾಡಬೇಕೆಂಬುದರ ಬಗ್ಗೆ ಅಡ್ವೋಕೇಚ್ ಜನರಲ… ಅವರಿಗೆ ಬಿಟ್ಟಿದ್ದೇವೆ. ನಾಳೆ ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಸಲ್ಲಿಸುತ್ತಿದ್ದೇವೆ. ಈಗಾಗಲೇ ನೀರು ಹರಿಸುವ ನಿರ್ಧಾರ ಮರು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ. ನಾವು ರೈತರ ಹಿತವನ್ನು ಕಾಯಬೇಕು. ಕೋರ್ಚ್ ನಿರ್ಧಾರಕ್ಕೂ ಆದ್ಯತೆ ನೀಡಬೇಕಾಗುತ್ತದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ