ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರಿಗೆ ಆರೋಗ್ಯ ಇಲಾಖೆ ಮಹತ್ವದ ಸಂದೇಶ...!

Published : May 22, 2020, 03:02 PM ISTUpdated : May 22, 2020, 03:15 PM IST
ರಾಜ್ಯದಲ್ಲಿ ಸಂಚರಿಸುವ  ಎಲ್ಲಾ ಪ್ರಯಾಣಿಕರಿಗೆ ಆರೋಗ್ಯ ಇಲಾಖೆ ಮಹತ್ವದ ಸಂದೇಶ...!

ಸಾರಾಂಶ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸೋಂಕು ನಿವಾರಣೆಗೆ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ.

ಬೆಂಗಳೂರು, (ಮೇ.22): ಲಾಕ್‌ಡೌನ್ 4.0 ಬಹುತೇಕ ಫುಲ್ ಸಡಿಲಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಜನರು ತೆರಳುತ್ತಿದ್ದಾರೆ. ಮತ್ತೊಂದೆಡೆ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವು ಶುರುವಾಗಿದೆ.

ಇದರಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಒಳಪಡಿಸುವುದು ಕಡ್ಡಾಯಗೊಳಿಸಿದೆ.

ಭಾರತದಲ್ಲಿ ಕೊರೋನಾ ಹರಡಲು ಬಿಡುವುದೇ ಮಾರ್ಗವೇ?

ರೈಲು ಮತ್ತು ಬಸ್ಸುಗಳಲ್ಲಿ ಸಂಚಾರ ಮಾಡುವ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲು ತೀರ್ಮಾನಿಸಲಾಗಿದ್ದು, ತನಿಖಾ ಠಾಣೆಗಳ ಬದಲಿಗೆ ಆರೋಗ್ಯ ತಪಾಸಣಾ ಕೇಂದ್ರಗಳು ಆಯಕಟ್ಟಿನ ಜಾಗದಲ್ಲಿ ಇರಲಿವೆ.

ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಮತ್ತು ಸಾರ್ವಜನಿಕ ವಾಹನಗಳಾದ ಬಸ್ಸು, ರೈಲುಗಳಲ್ಲಿ ಓಡಾಡುವ ಪ್ರಯಾಣಿಕರಿಗೆ ಕಡ್ಡಾಯ ಆರೋಗ್ಯ ತಪಾಸಣೆ.

ಒಂದು ವೇಳೆ ಕೊರೋನಾ ರೋಗ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆರೋಗ್ಯ ತಪಾಸಣೆ ಕೇಂದ್ರಕ್ಕೆ ದಾಖಲು ಮಾಡಲಾಗುವುದು ಎಂದು  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ