
ಬೆಂಗಳೂರು(ಏ.12): ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪತಂಜಲಿ ಕಂಪನಿಯ ಎಲ್ಲಾ ಉತ್ಪನ್ನಗಳನ್ನು ಆರೋಗ್ಯ ಇಲಾಖೆಯಿಂದ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತಂಜಲಿ ಉತ್ಪನ್ನಗಳಲ್ಲಿ ರೋಗ ಗುಣಪಡಿಸುವ ಅಂಶಗಳು ಮತ್ತು ಅದಕ್ಕೆ ಪುರಾವೆಗಳು ಇಲ್ಲದಿದ್ದರೂ ಇದೆ ಎಂದು ಜನರ ದಾರಿ ತಪ್ಪಿಸಲಾಗುತ್ತಿದೆ. ಕಂಪನಿಯ ಲಾಭಕ್ಕಾಗಿ ದಾರಿ ತಪ್ಪಿಸುವ ಸುಳ್ಳುಗಳನ್ನು ಹೇಳುತ್ತಿದ್ದರು. ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದರು. ಹೀಗಾಗಿಯೇ, ಪತಂಜಲಿ ಮತ್ತು ಅದರ ಮುಖ್ಯಸ್ಥರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ ಎಂದರು.
ನಾವು ಕುರುಡರಲ್ಲ, ಸಿಗಿದು ಹಾಕ್ತೇವೆ: ಬಾಬಾ ರಾಮದೇವ್ ಕೇಸಲ್ಲಿ ಸುಪ್ರೀಂ ಕಿಡಿ
ಯಾವುದೇ ಸಂಶೋಧನೆಗಳು, ದಾಖಲೆ ಇಲ್ಲದೆ ಪತಂಜಲಿ ಉತ್ಪನ್ನಗಳನ್ನು ಪ್ರಚಾರ ಮಾಡಲಾಗುತ್ತಿದೆ. ಪತಂಜಲಿ ಉತ್ಪನ್ನಗಳಲ್ಲಿ ಬೇರೆ ಏನಾದರೂ ಮಿಶ್ರಣ ಮಾಡಲಾಗಿದೆಯೇ ಎಂಬುದನ್ನು ನಾವು ಪರೀಕ್ಷಿಸುತ್ತೇವೆ. ನಮ್ಮ ರಾಜ್ಯದ ಔಷಧಿ ನಿಯಂತ್ರಣ ಇಲಾಖೆ ಮತ್ತು ಆಯುಷ್ ಇಲಾಖೆಯಿಂದ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಿ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಕಂಪನಿಯಿಂದ ಅಕ್ಷಮ್ಯ ಮೋಸವಾಗಿದೆ. ಆಯುರ್ವೇದ ಮತ್ತು ಭಾರತೀಯ ಔಷಧಿ ವ್ಯವಸ್ಥೆಗೆ ಆತ ಕಳಂಕ ತಂದಿದ್ದಾನೆ. ಎಲ್ಲವನ್ನು ಕಣ್ಣು ಮುಚ್ಚಿಕೊಂಡು ನಂಬಿದರೆ ಹೀಗೆ ಆಗುವುದು. ಪತಂಜಲಿಯ ಎಲ್ಲಾ ಉತ್ಪನ್ನಗಳನ್ನು ಪರೀಕ್ಷಿಸುವಂತೆ ನಮ್ಮ ಔಷಧ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ