
ಹೊಸಪೇಟೆ (ನ.03): ರಾಜ್ಯದಲ್ಲಿ ಕಾನೂನುಬದ್ಧ ಗಣಿಗಾರಿಕೆ ನಡೆಸಲು ಸರ್ಕಾರ ಸಹಕಾರ ನೀಡಲಿದೆ. ಅರಣ್ಯ ಇರಲಿ, ಕಂದಾಯ ಜಮೀನು ಇರಲಿ, ಕಾನೂನುಬದ್ಧವಾಗಿ ಲೈಸೆನ್ಸ್ ಪಡೆದಿದ್ದರೆ, ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಅಮರಾವತಿಯಲ್ಲಿ ಗುರುವಾರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ ಬಳಿಕವೇ ಸುಪ್ರೀಂಕೋರ್ಟ್ ಗಣಿಗಳನ್ನು ಕೆಟಗರಿಯಾಗಿ ವಿಂಗಡನೆ ಮಾಡಿದೆ. ಸಿ- ಕೆಟಗರಿ ಇರಲಿ, ಯಾವುದೇ ಗಣಿ ಇರಲಿ, ಕಾನೂನುಬದ್ಧವಾಗಿ ಲೈಸೆನ್ಸ್ ಪಡೆದು ಗಣಿಗಾರಿಕೆ ಮಾಡುತ್ತಿದ್ದರೆ, ಎಲ್ಲ ಸಹಕಾರ ನೀಡಲಾಗುವುದು. ಈಗಾಗಲೇ ಅರಣ್ಯ ಇಲಾಖೆ ಸಭೆ ನಡೆಸಿ ಸೂಚನೆ ನೀಡಿರುವೆ. ಈಗಲೂ ಅಕ್ರಮ ಗಣಿಗಾರಿಕೆ ನಡೆಸಿದರೆ ಸೂಕ್ತ ಕ್ರಮವಹಿಸಲಾಗುವುದು ಎಂದರು.
24ರಂದು ಎಮ್ಮೆಕೆರೆ ಈಜುಕೊಳ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ: ಸುಮಾರು 24.94 ಕೋಟಿ ರು. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಿಸಿರುವ ಎಮ್ಮೆಕೆರೆ ಈಜುಕೊಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 24ರಂದು ಉದ್ಘಾಟಿಸಲಿದ್ದಾರೆ. ಈಜುಕೊಳ ಉದ್ಘಾಟನೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಮ್ಮೆಕೆರೆ ಈಜುಕೊಳದಲ್ಲಿ ನವೆಂಬರ್ 24ರಿಂದ 26ರವರೆಗೆ ನಡೆಯುವ 19ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ನೊಂದಿಗೆ ಉದ್ಘಾಟನಾ ಕಾರ್ಯಕ್ರಮವನ್ನೂ ಹೊಂದಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈಜುಕೊಳ ನಿರ್ವಹಣೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಮುಂದಿನ ಮೂರು ವರ್ಷಗಳ ಕಾಲ ನಿರ್ವಹಣೆಯ ಜವಾಬ್ದಾರಿಯನ್ನು ಗುತ್ತಿಗೆದಾರರು ಹೊಂದಿರುವುದರಿಂದ ಅದರ ಮುಂದಿನ ಕ್ರಮಗಳ ಬಗ್ಗೆ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಕೆರೆ ಉದ್ಘಾಟಿಸುವ ಮೊದಲು ಸ್ಥಳೀಯರ ಬೇಡಿಕೆ ಈಡೇರಿಸುವುದು ಮುಖ್ಯ. ಈ ಹಿಂದೆ ಆಟದ ಮೈದಾನವಾಗಿದ್ದ ಜಾಗದಲ್ಲಿ ಕೆರೆ ನಿರ್ಮಾಣಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಬೇಡಿಕೆಗಳು ಈಡೇರುವ ಭರವಸೆಯೊಂದಿಗೆ ಕೆರೆ ನಿರ್ಮಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸ್ಥಳೀಯ ನಿವಾಸಿಗಳ ವಿಶ್ವಾಸ ಮತ್ತು ಸಹಕಾರ ಪಡೆಯುವುದಾಗಿ ತಿಳಿಸಿದರು.
ಬಿಜೆಪಿಯವರದ್ದು ತಲೆಬುಡವಿಲ್ಲದ ಕಾನೂನುಗಳು: ಡಿಕೆಶಿ ವಾಗ್ದಾಳಿ
ಮುಖ್ಯಮಂತ್ರಿಗಳ ಮಂಗಳೂರಿಗೆ ಭೇಟಿ ಸಂದರ್ಭದಲ್ಲಿ ಕದ್ರಿ ಮಾರುಕಟ್ಟೆ ಸೇರಿದಂತೆ ಇತರ ಯೋಜನೆಗಳ ಉದ್ಘಾಟನೆ, ಅಥವಾ ಗುದ್ದಲಿ ಪೂಜೆ ಇದ್ದರೆ ಕ್ರೋಢೀಕರಿಸಿ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಜನರಲ್ ಮ್ಯಾನೇಜರ್ (ತಾಂತ್ರಿಕ) ಅರುಣ್ ಪ್ರಭಾ ಕೆ.ಎಸ್. ಮತ್ತು ಮುಡಾ ಮಾಜಿ ಅಧ್ಯಕ್ಷ ತೇಜೋಮಯ ಈಜುಕೊಳದ ಬಗ್ಗೆ ವಿವರಗಳನ್ನು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ