
ಬೆಂಗಳೂರು, (ಏ.22): ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದ್ದು, ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ.
ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದೇಶ ಹೊರಡಿಸಿದ ಬೆನ್ನಲ್ಲಿಯೇ ಕಲಬುರಗಿ ನಗರದಲ್ಲಿ ಪೊಲೀಸ್ ಪಡೆ ಅಖಾಡಕ್ಕೆ ಇಳಿದಿದೆ.
ರಾಜ್ಯಾದ್ಯಂತ ಪೊಲೀಸರು, ಹಲವು ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.
ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಮತ್ತೆಲ್ಲವೂ ಬಂದ್
ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.
ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಕೊರೋನಾ ಹೋರಾಟಕ್ಕೆ ಬೆಂಬಲಿಸಿ ಅಂಗಡಿಗಳನ್ನ ಬಂದ್ ಮಾಡಿಕೊಂಡರು.
ಈಗಾಗಲೇ ಬೆಂಗಳೂರು ಉಡುಪಿ, ಕಲಬುರಗಿ, ಬೀದರ್, ರಾಯಚೂರು, ಕೋಲಾರ ಸೇರಿದಂತೆ ಹಲವುಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವನ್ನೂ ಪೊಲಿಸರು ಬಂದ್ ಮಾಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕರ್ನಾಟಕವೇ ಅರ್ಧ ಲಾಕ್ ಆದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ