ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ ಶುರುವಾಗಲಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ (ಫೆ.11): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ ಶುರುವಾಗಲಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ ಸಂಸ್ಥೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮ ಸಮಾವೇಶ ಮುಖಯವಾಗಿದೆ.
ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಸಮಾವೇಶ ನಡೆಯಲಿದೆ, ಸುವರ್ಣ ಸಂಭ್ರಮ ಹಾಗೂ ಕೃಷಿಕ ಸಹಕಾರಿಗಳ ಮಹಾ ಸಮಾವೇಶದಲ್ಲಿ ಅಮಿತ್ ಶಾ ಪ್ರಮುಖ ಆಕರ್ಷಣೆ ಆಗಿದ್ದಾರೆ. ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಭಾಗದ ಸಹಕಾರಿ ಸಂಘಗಳ ಸದಸ್ಯರು ಮತ್ತು ಪ್ರಮುಖರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರಾವಳಿ ಜಿಲ್ಲೆಗಳ ಸಹಕಾರಿ ಇಲಾಖೆಗೆ ಸಂಬಂಧಿಸಿದ 66 ಸಾವಿರ ಫಲಾನುಭವಿಗಳು ಭಾಗಿಯಾಗಲಿದ್ದಾರೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೇರಿ ಸುಮಾರು ಹತ್ತಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ. ಇನ್ನು ಒಟ್ಟಾರೆ ಸಾವಿರಾರು ಸಹಕಾರಿಗಳ ಸಮ್ಮುಖದಲ್ಲಿ ಬೃಹತ್ ಸಮಾವೇಶ ವಿಜೃಂಭಣೆಯಿಂದ ನಡೆಯಲು ಸಿದ್ಧತೆ ನಡೆಸಲಾಗಿದೆ.
Mangaluru: ಅಮಿತ್ ಶಾ ರೋಡ್ ಶೋ ಮುಖ್ಯವಲ್ಲ: ನಮಗೆ ಕೊರಗಜ್ಜನ ಕೋಲವೇ ಮುಖ್ಯ
ಬರೋಬ್ಬರಿ 3,500 ಪೊಲೀಸರ ಭದ್ರತೆ: ಗೃಹ ಸಚಿವ ಅಮಿತ್ ಶಾ ಅವರು ಪಾಲ್ಗೊಳ್ಳುತ್ತಿರವ ಕ್ಯಾಂಪ್ಕೋ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಬರೋಬ್ಬರಿ 3,500 ಪೊಲೀಸರು ಭದ್ರತೆ ಒದಗಿಸಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಇಂಧನ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಗೃಹ ಸಚಿವ ಅರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್. ಟಿ ಸೋಮಶೇಖರ್, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಅಂಗಾರ ಎಸ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಕ್ಯಾಂಪ್ಕೋ ಸಂಸ್ಥೆಯ ವಿವರ: ಇನ್ನು ದಕ್ಷಿಣ ಕನ್ನಡ ಪ್ರಮುಖ ಉದ್ಯಮ ಸಂಸ್ಥೆಯಾಗಿರುವ 'ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್ (CAMPCO) ಲಿಮಿಟೆಡ್' 1973 ರಲ್ಲಿ ಸ್ಥಾಪಿಸಲಾದ ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಘವಾಗಿದೆ. ಅಡಿಕೆ, ಕೊಕ್ಕೊ, ರಬ್ಬರ್ ಮತ್ತು ಇದೀಗ ಕರಿಮೆಣಸಿನ ಉದ್ಯಮ ವ್ಯವಹಾರವನ್ನು ಮಾಡುತ್ತಿದೆ. ಕೊಕ್ಕೊ ಆಧಾರಿತ ಚಾಕೊಲೇಟ್ ಮತ್ತು ಇತರ ಅರೆ-ಸಿದ್ಧ ಕೊಕ್ಕೊ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ಉತ್ಪನ್ನವನ್ನು ಸರಬರಾಜು ಮಾಡುತ್ತದೆ. ಆರಂಭದಲ್ಲಿ ಕೇವಲ 3,576 ರೈತರ ಸದಸ್ಯತ್ವದೊಂದಿಗೆ ಶುರುವಾದ ಕ್ಯಾಂಪ್ಕೋ ಈಗ ಬರೋಬ್ಬರಿ 1,38,000 ಕ್ಕೂ ಹೆಚ್ಚು ರೈತರ ಸದಸ್ಯತ್ವ ಹೊಂದಿರುವ ಸಹಕಾರ ಸಂಘವಾಗಿದೆ. ಈಗ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು, ಕೇಂದ್ರ ಸರ್ಕಾರದ ಪ್ರೋತ್ಸಾಹ ಮತ್ತು ಉತ್ತೇಜನ ಲಭ್ಯವಾದಲ್ಲಿ ಇನ್ನೂ ದೊಡ್ಡ ಸಂಸ್ಥೆಯಾಗಿ ಹೊರಹೊಮ್ಮಲಿದೆ.