
ಚಿಕ್ಕೋಡಿ/ಬೆಳಗಾವಿ/ ಹುಬ್ಬಳ್ಳಿ (ಸೆ.19) ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಅವರು ಶನಿವಾರ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, ವಿವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗಲಿದ್ದಾರೆ. ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ಕೆಎಲ್‌ಇ ಜ.ಗಂಗಾಧರ ಮಹಾಸ್ವಾಮೀಜಿ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ (ಜೆಜಿಎಂಎಂಎಂಸಿ) ಮತ್ತು 1,200 ಹಾಸಿಗೆಗಳ ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ (ಕೆಎಲ್ ಇ-ಎಚ್‌ಎಂಆರ್‌ಸಿ)ವನ್ನು ಸೆ.19ರಂದು ಅಮಿತ್ ಶಾ ಲೋಕಾರ್ಪಣೆಗೊಳಿಸಲಿದ್ದಾರೆ.
ಆನಂತರ ಬೆಳಗಾವಿ ಜಿಲ್ಲೆಯ ಯಕ್ಸಂಬಾಕ್ಕೆ ಆಗಮಿಸಿ ಶ್ರೀ ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ.ಶುಕ್ರವಾರ ರಾತ್ರಿ 9 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದಾರೆ. ಕಾರ್ಯಕ್ರಮದ ಹಿನ್ನೆಲೆ ಗಬ್ಬೂರು ವೃತ್ತದಲ್ಲಿರುವ ಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಕಾಲೇಜು ಕಟ್ಟಡ ಎದುರು ಬೃಹತ್ ಪೆಂಡಲ್ ನಿರ್ಮಿಸಲಾಗಿದೆ. 10 ಸಾವಿರ ಜನರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸನ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 11.30ಕ್ಕೆ ಸಮಾರಂಭದ ಸ್ಥಳಕ್ಕೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 1.5 ಗಂಟೆಗೂ ಹೆಚ್ಚು ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಸಾಥ್ ನೀಡಲಿದ್ದಾರೆ.
ಇನ್ನು ದಕ್ಷಿಣ ಭಾರತದ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಹಾಗೂ ನ್ಯಾಷನಲ್ ಕೋ-ಆಪರೇಟಿವ್ ಯೂನಿಯನ್ ಆಫ್ ಇಂಡಿಯಾ (ಎನ್‌ಸಿಯುಐ) ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಹಕಾರ ರಾಜ್ಯ ಸಚಿವ ಮುರಳೀಧರರಾವ್ ಮೋಹೋಳ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ