
ಬೆಂಗಳೂರು (ಜೂ.04): ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಶುಕ್ರವಾರ ಅನುಮೋದನೆ ನೀಡಿದೆ. ತನ್ಮೂಲಕ ಈ ಯೋಜನೆಯಡಿ ಇದುವರೆಗೆ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 2993 ಕೋಟಿ ರು.ಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಂತಾಗಿದೆ. ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3885 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಕಳೆದ ಜನವರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರಕಿತ್ತು.
ಅದಕ್ಕೆ ಪೂರಕವಾಗಿ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಿದ್ದವು. ಅವುಗಳಿಗೆ ಪೌರಾಡಳಿತ ಇಲಾಖೆಯು ಹಂತ ಹಂತವಾಗಿ ಈ ಯೋಜನೆಗಳ ಕಾಮಗಾರಿಗಳಿಗೆ ಕ್ರಿಯಾಯೋಜನೆ ನೀಡುತ್ತಾ ಬರುತ್ತಿದೆ. ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆ ನಡೆಯಿತು.
ಬೀಜ, ಗೊಬ್ಬರ ಕೊರತೆಯಾಗದಂತೆ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ!
ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 80.75 ಕೋಟಿ ರು., ಬೆಂಗಳೂರು ನಗರ ಜಿಲ್ಲೆಯ 123.25 ಕೋಟಿ ರು., ಕೋಲಾರ ಜಿಲ್ಲೆಯ (ಬಂಗಾರ ಪೇಟೆ ಪುರಸಭೆ ಮಾತ್ರ) 8.5 ಕೋಟಿ ರು., ತುಮಕೂರು ಜಿಲ್ಲೆ (ತಿಪಟೂರು ನಗರ ಸಭೆ ಮತ್ತು ಹುಳಿಯಾರು ಪಟ್ಟಣ ಪಂಚಾಯಿತಿ ಹೊರತು ಪಡಿಸಿ) 72.25 ಕೋಟಿ ರು., ಹಾಸನ ನಗರ ಸಭೆಗೆ ಹೆಚ್ಚುವರಿ ಮೊತ್ತ 6 ಕೋಟಿ ರು., ಬೆಳಗಾವಿ (ಚಿಕ್ಕೋಡಿ ಪುರಸಭೆ ಮಾತ್ರ) 8.5 ಕೋಟಿ ರು., ಉತ್ತರ ಕನ್ನಡ (ಕಾರವಾರ,ದಾಂಡೇಲಿ, ಕುಮಟ,ಅಂಕೋಲ, ಹೊನ್ನಾವರ ನಗರ ಸ್ಥಳೀಯ ಸಂಸ್ಥೆಗಳು ಮಾತ್ರ) 80.75 ಕೋಟಿ ರು. ಹಾಗೂ ಕಲಬುರಗಿ ಜಿಲ್ಲೆಯ 97.75 ಕೋಟಿ ರು. ಸೇರಿ ಒಟ್ಟು 9 ಜಿಲ್ಲೆಗಳ 503.25 ಕೋಟಿ ರು. ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಮೊದಲು ಇಲಾಖೆಯು 2400 ಕೋಟಿ ರು.ಗಳಿಗೂ ಹೆಚ್ಚಿನ ಕಾಮಗಾರಿಗಳಿಗೆ ಅನುಮೋದನೆ ನೀಡಿತ್ತು.
2 ವರ್ಷದಲ್ಲಿ ಅಮೃತ ಕಾಮಗಾರಿ ಪೂರ್ಣಗೊಳಿಸಿ: ಬೆಂಗಳೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮೂರು ವರ್ಷಗಳ ಬದಲಿಗೆ ಎರಡು ವರ್ಷದಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಬಜೆಟ್ ಘೋಷಣೆ ಜಾರಿ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಶುರುವಾಗಿದೆ. ಒಟ್ಟು 3885 ಕೋಟಿ ರು. ಅಂದಾಜು ವೆಚ್ಚದ ಈ ಯೋಜನೆಯನ್ನು 2024ರಲ್ಲಿ ಪೂರ್ಣಗೊಳಿಸಬೇಕು ಎಂದರು.
9 ಜಿಲ್ಲೆ ಕಾಮಗಾರಿಗೆ ಅಸ್ತು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಶುಕ್ರವಾರ ಅನುಮೋದನೆ ನೀಡಿದೆ. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಜೆಟ್‌ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳ ಜಾರಿ ಸಂಬಂಧ ನಗರಾಭಿವೃದ್ಧಿ, ಸಾರಿಗೆ ಮತ್ತು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಶುರುವಾಗಿದೆ. ಒಟ್ಟು 3885 ಕೋಟಿ ರು. ಅಂದಾಜು ವೆಚ್ಚದ ಈ ಯೋಜನೆಯನ್ನು 2024ರಲ್ಲಿ ಪೂರ್ಣಗೊಳಿಸಬೇಕು. ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಐದು ವರ್ಷಗಳಲ್ಲಿ ರಾಜ್ಯದ ಪಾಲೂ ಸೇರಿದಂತೆ ಒಟ್ಟು 9260 ಕೋಟಿ ರು. ವೆಚ್ಚದಲ್ಲಿ 287 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಬೇಕು ಎಂದು ತಿಳಿಸಿದರು.
ನವೋದ್ಯಮಗಳಿಗೆ ಸರ್ಕಾರದ ಬೆಂಬಲ ಸದಾ ಸಿಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಆರು ಸಾವಿರ ಪೌರ ಕಾರ್ಮಿಕರ ನೇಮಕಕ್ಕೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ನೇಮಕಾತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಬೇಕು. ಪೌರಕಾರ್ಮಿಕರಿಗೆ ಎರಡು ಸಾವಿರ ರು. ಹಾರ್ಡ್‌ಷಿಪ್ ಭತ್ಯೆ ನೀಡಲು ಕ್ರಮ ವಹಿಸಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ