ಭಾರತ ಇಸ್ಲಾಂ ದೇಶ ಮಾಡಲು ಕೆಲವರಿಂದ ಯತ್ನ: ಬೊಮ್ಮಾಯಿ

Published : Aug 16, 2023, 04:00 AM IST
ಭಾರತ ಇಸ್ಲಾಂ ದೇಶ ಮಾಡಲು ಕೆಲವರಿಂದ ಯತ್ನ: ಬೊಮ್ಮಾಯಿ

ಸಾರಾಂಶ

ಸ್ವತಂತ್ರ ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಕಳೆದ 9 ವರ್ಷಗಳಿಂದ ಸಕಾರಾತ್ಮಕ ಆಡಳಿತ ನೀಡುತ್ತಿದ್ದಾರೆ. ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿದ್ದಾರೆ. ವಿಜ್ಞಾನ-ತಂತ್ರಜ್ಞಾನ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಮಾಡಿದ್ದಾರೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಆ.16): ಸಮರ್ಥ ಭಾರತ ನಿರ್ಮಾಣದ ಪ್ರಯತ್ನ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಇಸ್ಲಾಂ ರಾಷ್ಟ್ರ ಮಾಡುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಭಾರತಕ್ಕೆ ನರೇಂದ್ರ ಮೋದಿ ಅವರ ನಾಯಕತ್ವದ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಂಗಳವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವತಂತ್ರ ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಕಳೆದ 9 ವರ್ಷಗಳಿಂದ ಸಕಾರಾತ್ಮಕ ಆಡಳಿತ ನೀಡುತ್ತಿದ್ದಾರೆ. ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿದ್ದಾರೆ. ವಿಜ್ಞಾನ-ತಂತ್ರಜ್ಞಾನ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಮಾಡಿದ್ದಾರೆ. ನಮ್ಮ ವಿರೋಧಿಗಳೇ ಮೋದಿ ನಾಯಕತ್ವ ಮೆಚ್ಚಿಕೊಳ್ಳುತ್ತಿರುವಾಗ ನಮ್ಮ ದೇಶದ ಕೆಲ ನಾಯಕರು ವಿದೇಶಗಳಿಗೆ ಹೋಗಿ ಭಾರತವನ್ನು ದ್ವೇಷಿಸುತ್ತಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತರರು ಸುರಕ್ಷಿತವಾಗಿಲ್ಲ ಎಂದು ಹೇಳುತ್ತಾರೆ ಎಂದು ಕಿಡಿಕಾರಿದರು.

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

ಮುಸ್ಲಿಮರೇ ಬಹುಸಂಖ್ಯಾತರಾಗಿರುವ ದೇಶಗಳಲ್ಲಿ ಅವರ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ನೋಡಬೇಕು. ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಭಾರತಕ್ಕೆ ನರೇಂದ್ರ ಮೋದಿ ಅವರ ನಾಯಕತ್ವ ಅಗತ್ಯವಿದೆ. ಅವರ ಜತೆಗೆ ನಾವೂ ದೇಶದ ಭವಿಷ್ಯಕ್ಕಾಗಿ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಜಗತ್ತಿನಲ್ಲಿ ಎಲ್ಲಾ ಧರ್ಮಗಳು ಸಂಘರ್ಷದಿಂದಲೇ ಹುಟ್ಟಿವೆ. ಆದರೆ, ಹಿಂದೂ ಧರ್ಮ ಮಾತ್ರ ಸಂಸ್ಕಾರದಿಂದ ಹುಟ್ಟಿದೆ. ನಮ್ಮ ಇತಿಹಾಸದಲ್ಲಿ ಅನೇಕ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರು ಇದ್ದಾರೆ. ಇತಿಹಾಸದ ಸತ್ಯ ಹೇಳಲು ಯಾರು ಮುಂದೆ ಬಂದಿಲ್ಲ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಲಗಂಗಾಧರ ತಿಲಕ, ಭಗತ್‌ ಸಿಂಗ್‌, ರಾಜಗುರು ಇವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಸುಭಾಶ್ಚಂದ್ರ ಬೋಸ್‌ ಕಾಂಗ್ರೆಸ್ಸಿಗರಾದರೂ ಪಕ್ಷ ತೊರೆದು ಹೋರಾಟ ನಡೆಸಿದರು.

ಬ್ರಿಟೀಷರು ಭಾರತವನ್ನು ವಿಭಜಿಸಿದರು. ಕಾಂಗ್ರೆಸ್ಸಿಗರು ಅಧಿಕಾರದ ಆಸೆಗೆ ದೇಶದ ವಿಭಜನೆಗೆ ಒಪ್ಪಿಕೊಂಡರು. ಭಾರತ ತೋಡೋ ಆಗಿನಿಂದಲೇ ಆರಂಭವಾಗಿದೆ. ಆದರೆ, ಈಗ ಭಾರತ ಜೋಡೋ ಯಾತ್ರೆ ಮಾಡುತ್ತಾರೆ. ಇದು ವಿಪರ್ಯಾಸ ಎಂದು ಕಾಂಗ್ರೆಸ್‌ ಪಕ್ಷವನ್ನು ಬಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌  ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ