ಅನಂತ್‌ ನೆಚ್ಚಿನ ಮೈದಾನದಲ್ಲಿ ಅಂತಿಮ ದರ್ಶನ

Published : Nov 13, 2018, 11:08 AM ISTUpdated : Nov 13, 2018, 12:53 PM IST
ಅನಂತ್‌ ನೆಚ್ಚಿನ ಮೈದಾನದಲ್ಲಿ ಅಂತಿಮ ದರ್ಶನ

ಸಾರಾಂಶ

ಅನಂತಕುಮಾರ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಕೊಂಡೊಯ್ದು ಬಳಿಕ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರದ ವಿಧಿವಿಧಾನದ ಪ್ರಕಾರ ನಡೆಯಲಿದೆ. 

ಬೆಂಗಳೂರು[ನ.13]: ಕೇಂದ್ರ ಸಚಿವ ಅನಂತಕುಮಾರ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಮಂಗಳವಾರ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಮಾಡಲಾಗಿರುವ ಪೂರ್ವ ಸಿದ್ಧತೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಸೋಮವಾರ ಮಧ್ಯಾಹ್ನ ಪರಿಶೀಲನೆ ನಡೆಸಿದ್ದಾರೆ.

ಮೈದಾನದಲ್ಲಿ ಮಾಡಿರುವ ಭದ್ರತೆಯ ಸಿದ್ಧತೆಗಳ ಬಗ್ಗೆ ಸ್ಥಳದಲ್ಲಿದ್ದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌, ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರಿಂದ ಮಾಹಿತಿ ಪಡೆದಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ತಾಸು ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ದರ್ಶನಕ್ಕೆ ಸಾರ್ವಜನಿಕರು ಹಾಗೂ ಗಣ್ಯರಿಗೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌ ಸೇರಿದಂತೆ ಕೇಂದ್ರದ ಹಲವು ಸಚಿವರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಮೈದಾನದಲ್ಲಿ ಕೈಗೊಳ್ಳಲಾಗಿರುವ ಸೂಕ್ತ ಭದ್ರತೆಯನ್ನು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ನಂತರ ಮಾತನಾಡಿದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ, ಸಂಚಾರ ನಿಯಂತ್ರಣಕ್ಕೆಂದು ಸುಮಾರು 4,500 ಸಂಚಾರ ಪೊಲೀಸರನ್ನು ಬಳಸಿಕೊಳ್ಳಲಾಗಿದೆ. ಬೆಂಗಳೂರಿನ ಬಹುತೇಕ ಸಿಬ್ಬಂದಿ ಭದ್ರತೆಯಲ್ಲಿ ಪಾಲ್ಗೊಂಡಿದ್ದಾರೆ.

"

7ಕ್ಕೆ ಮನೆಯಿಂದ ಬಿಜೆಪಿ ಕಚೇರಿಗೆ:

ಮಂಗಳವಾರ ಬೆಳಗ್ಗೆ ಏಳು ಗಂಟೆಗೆ ಅನಂತಕುಮಾರ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಕೊಂಡೊಯ್ದು ಬಳಿಕ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುವುದು. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರದ ವಿಧಿವಿಧಾನದ ಪ್ರಕಾರ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಚಾಮರಾಜಪೇಟೆ ರುದ್ರಭೂಮಿ ಪರಿಶೀಲನೆ

ಇನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರಾದಾಯದಂತೆ ಅಂತ್ಯಕ್ರಿಯೆ ನೇರವೇರಿಸಲು ಅನಂತಕುಮಾರ್‌ ಅವರ ಕುಟುಂಬ ವರ್ಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಅವರು ಹಿರಿಯ ಅಧಿಕಾರಿಗಳೊಂದಿಗೆ ಚಾಮರಾಜಪೇಟೆಯ ರುದ್ರಭೂಮಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ಕಾರಣ ಯಾವೆಲ್ಲಾ ರೀತಿಯ ಮುಂಜಾಗೃತ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ನ.13 ರಂದು ಚಾಮರಾಜಪೇಟೆಯ ರುದ್ರಭೂಮಿ ಇರುವ ರಸ್ತೆಯಲ್ಲಿ ಯಾವುದೇ ವಾಹನ ನಿಲುಗಡೆಗೆ ಅವಕಾಶ ನೀಡಬಾರದು. ಗಣ್ಯರು ಹಾಗೂ ಅತಿಗಣ್ಯರಿಗೆ ಸ್ಥಳವಕಾಶ ಕಲ್ಪಿಸುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!