
ಯೋಜನೆಗೆ ತಡೆ ನೀಡುವಂತೆ ಸುಪ್ರೀಂನಲ್ಲಿ ವಾದ
ಬೆಂಗಳೂರು (ಸೆ.25): ಭದ್ರಾ ಮೇಲ್ದಂಡೆ ಯೋಜನೆಗೆ ಆಂಧ್ರಪ್ರದೇಶ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ 8 ವಾರಗಳ ಕಾಲ ಮುಂದೂಡಿದೆ.
ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ಪೀಠದಲ್ಲಿ ಗುರುವಾರ ಈ ಸಂಬಂಧದ ಅರ್ಜಿಯ ವಿಚಾರಣೆ ನಡೆಯಿತು. ಈ ಯೋಜನೆಯಿಂದ ತುಂಗಭದ್ರಾ ನದಿಯ ಹರಿವಿನಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿ ರಾಯಲಸೀಮಾ ಭಾಗಕ್ಕೆ ಹರಿಯುವ ನೀರಿನ ಪ್ರಮಾಣ ತಗ್ಗುತ್ತದೆ. ಅಲ್ಲದೆ, ಯೋಜನೆಯಲ್ಲಿ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ (ಕೆಡಬ್ಲ್ಯೂಡಿಟಿ-ಐ)ಯ ತೀರ್ಪು ಸಂಬಂಧ ಹಲವು ಉಲ್ಲಂಘನೆಗಳು ಆಗಿವೆ. ಹೀಗಾಗಿ, ಭದ್ರಾ ಮೇಲ್ದಂಡೆ ಯೋಜನೆ ಕೈಗೆತ್ತಿಕೊಳ್ಳದಂತೆ ಕರ್ನಾಟಕಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಆಂಧ್ರ ವಾದಿಸಿತು. ಆಂಧ್ರದ ವಾದ ಆಲಿಸಿದ ನ್ಯಾಯಪೀಠ, ಯಾವ ರೀತಿಯ ಉಲ್ಲಂಘನೆಗಳು ಆಗಿವೆ ಎಂಬುದರ ಪಟ್ಟಿ ನೀಡಿ ಎಂದು ಆಂಧ್ರಕ್ಕೆ ಸೂಚಿಸಿ, ವಿಚಾರಣೆಯನ್ನು ಎಂಟು ವಾರಗಳ ಕಾಲ ಮುಂದೂಡಿತು.
ಇದನ್ನೂ ಓದಿ: 26 ವರ್ಷಗಳ ಬಳಿಕ ಈ ನಾಲ್ಕು ಜಿಲ್ಲೆಗಳಿಗೆ ಹರಿಯಲಿದೆ ತುಂಗಾ ನೀರು!
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ನೆರೆಯ ಆಂಧ್ರಪ್ರದೇಶ ಸರ್ಕಾರ ಈ ಯೋಜನೆಗೆ ಕ್ಯಾತೆ ತೆಗೆಯುತ್ತಿದೆ. ಚಿತ್ರದುರ್ಗ, ದಾವಣಗೆರೆ ಸೇರಿ ಮಧ್ಯ ಕರ್ನಾಟಕ ಭಾಗದ ಬರಪೀಡಿತ ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯುವ ನೀರನ್ನು ಒದಗಿಸುವ ಒಂದು ಪ್ರಮುಖ ಏತ ನೀರಾವರಿ ಯೋಜನೆಯಿದು.
ಇನ್ನಷ್ಟು ಓದಿ: ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ ಈ ನಾಲ್ಕು ಜಿಲ್ಲೆಗಳಿಗೆ ಹರಿಯಲಿದೆ ನೀರು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ