
ಮಂಗಳೂರು (ಫೆ.24): ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.
ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್‌ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೆರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದರು.
ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿದ ಉದ್ಯಮಿ ಮಹಿಳೆ!
ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜಾ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ಕೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
ಪತ್ನಿಯ ಫೋನ್ ಸಂಭಾಷಣೆ ಕದ್ದಾಲಿಸಿ 15 ಕೋಟಿ ರೂ ಲಾಭ ಗಳಿಸಿದ ಪತಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ