ಅನಿಲ್‌ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ, ಸಂಭಾವನೆ ಎಷ್ಟು? ಸಚಿವ ಖಂಡ್ರೆ ಹೇಳಿದ್ದೇನು?

Kannadaprabha News   | Kannada Prabha
Published : May 28, 2025, 05:54 AM IST
Image of Anil Kumble

ಸಾರಾಂಶ

ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ಬೆಂಗಳೂರು (ಮೇ.28): ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿರುವ ಅನಿಲ್‌ ಕುಂಬ್ಳೆ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅರಣ್ಯ, ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಈ ಕಾರ್ಯಕ್ಕೆ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಈಶ್ವರ್‌ ಖಂಡ್ರೆ ತಿಳಿಸಿದರು.

8,848 ವನಮಹೋತ್ಸವ: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗಿದೆ, 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ವಿವರ ನೀಡಿದರು.

ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.

ಅಪಘಾತದ ಗಾಯಾಳುಗಳಿಗೆ ಧನ ಸಹಾಯ: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಭಾಗವಹಿಸಲು ಎಚ್.ಡಿ. ಕೋಟೆ ತಾಲೂಕಿನ ಕಟ್ಟೆ ಮನಗನಹಳ್ಳಿ ಗ್ರಾಮದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿ ಜೆಎಸ್ಎಸ್ ಆಸ್ಪತ್ರೆ ಸೇರಿದ ಸುಮಾರು 9 ಜನರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಈಶ್ವರ್ ಖಂಡ್ರೆ ಅವರು, ವೈಯಕ್ತಿಕವಾಗಿ 1.50 ಲಕ್ಷ ರೂ. ಧನಸಹಾಯ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಹಾಗೂ ವೀರಶೈವ ಸಮಾಜದ ಮುಖಂಡರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌