
ಚಿಕ್ಕಮಗಳೂರು: ಅಂಗಡಿ ಪಾಲಾಗುತ್ತಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜನರು ಅನ್ನಭಾಗ್ಯದಲ್ಲಿ ಸಿಕ್ಕ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿದ್ದು, ಆಟೋ ಚಾಲಕರೊಬ್ಬರು ಕ ತೇಗೂರು ಗ್ರಾಮದ ಜನರಿಂದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದರು. ಆದರೆ ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ 4 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಅಕ್ಕಿಯನ್ನು ಆಟೋದಲ್ಲಿ ಸಾಗಿಸಲಾಗುತ್ತಿತ್ತು. ಈ ಅಕ್ಕಿಗೆ ಯಾವುದೇ ಬಿಲ್ ಇಲ್ಲದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜನರಿಂದ ಸಂಗ್ರಹಿಸಿದ ಅಕ್ಕಿಯನ್ನು ನಗರದ ಅಂಗಡಿಯೊಂದಕ್ಕೆ ಮಾರಾಟಕ್ಕೆ ಸಿದ್ಧತೆ ಮಾಡಲಾಗಿತ್ತು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಎನ್.ಎಂ.ಸಿ ವೃತ್ತದಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮಕ್ಕಳೇ ಪರೀಕ್ಷೆಯ ಜೀವನವಲ್ಲ: ಸಾವಿಗೆ ಶರಣಾಗದಿರಿ: ಚಿತ್ರದುರ್ಗದಲ್ಲಿ ಬಾಲಕ, ಮೈಸೂರಲ್ಲಿ ಬಾಲಕಿ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ