ಸಾಹಿತ್ಯ ಸಮ್ಮೇಳನದ ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜುಗಳಿಗೆ ಜ.4ರಿಂದಲೇ ರಜೆ ಘೋಷಣೆ

By Govindaraj S  |  First Published Jan 2, 2023, 11:22 PM IST

ಜನವರಿ 6, 7 ಮತ್ತು 8ರಂದು  ಹಾವೇರಿ ನಗರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಹಿನ್ನಲೆಯಲ್ಲಿ ಜ.6 ಮತ್ತು 7ರಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ  ರಜೆ ಘೋಷಿಸಲಾಗಿದೆ.


ಹಾವೇರಿ (ಜ.02): ಜನವರಿ 6, 7 ಮತ್ತು 8ರಂದು  ಹಾವೇರಿ ನಗರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಹಿನ್ನಲೆಯಲ್ಲಿ ಜ.6 ಮತ್ತು 7ರಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ  ರಜೆ ಘೋಷಿಸಲಾಗಿದೆ ಹಾಗೂ ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಿಗೆ ಜನವರಿ 4 ರಿಂದ 7ರವರೆಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ತಿಳಿಸಿದ್ದಾರೆ. 

ಸಮ್ಮೇಳನದಲ್ಲಿ ಭಾಗವಹಿಸುವವರಿಗೆ  ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜುಗಳಿಗೆ ಜ.4 ಮತ್ತು 5 ರಂದು ಹೆಚ್ಚುವರಿ ರಜೆ ಘೋಷಿಸಲಾಗಿದೆ. ಐದು ಪದವಿ ಪೂರ್ವ ಕಾಲೇಜು ಹಾಗೂ  ಶಾಲೆಗಳು ಹಾಗೂ ವಿವಿಧ ವಸತಿ ಶಾಲೆಗಳು ಸೇರಿ 67 ಶಾಲೆಗಳು ಜನವರಿ 4 ರಿಂದ 7ರವರೆಗೆ  ರಜೆ ಘೋಷಿಸಲಾಗಿದೆ. ಜ.8 ಭಾನುವಾರಗಿರುವುದರಿಂದ ಸಾರ್ವತ್ರಿಕ ರಜೆ ಇದೆ. 

Latest Videos

undefined

ವಸತಿ ವ್ಯವಸ್ಥೆ ಮಾಡಿರುವ ಹಾವೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜು, ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜುಗಳಿಗೆ ಜ.4 ರಿಂದ 8ರವರೆಗೆ ಪದವಿ ಪೂರ್ವ ಶಿಕ್ಷಣ ಜಂಟಿ ನಿರ್ದೇಶಕರು ರಜೆ ಘೋಷಿಸಿದ್ದಾರೆ ಹಾಗೂ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಕೂಡ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಹಾವೇರಿ ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಜ.6  ಮತ್ತು 7 ರಂದು ರಜೆ ಘೋಷಿಸಲಾಗಿದೆ. 

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ

ಸದರಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಇತರ ಸಿಬ್ಬಂದಿಗಳು ಈ ಸಮ್ಮೇಳನದಲ್ಲಿ ಭಾಗವಹಿಸುವುದನ್ನು ಅನ್ಯಕಾರ್ಯದ ನಿಮಿತ್ಯ (ಒಒಡಿ) ಎಂದು ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಅಪರ ನಿರ್ದೇಶಕರು, ಸದರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಹಾಗೂ ಮುಖ್ಯ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜನವರಿ 6 ಮತ್ತು 7 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ  ರಜೆ ಘೋಷಿಸಿದ್ದಾರೆ.   ಹಾಗೂ ವಸತಿ  ವ್ಯವಸ್ಥೆ ಮಾಡಿರುವ 67 ಶಾಲೆಗಳಿಗೆ ಜ.4 ರಿಂದ 7ರವರೆಗೆ ರಜೆ ನೀಡಿ ಆದೇಶಿಸಿದ್ದಾರೆ.

click me!