ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ. ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಮೇಲೆ ಹಲ್ಲೆ ನಡೆಸಿದ ತಂಡ. ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.
ಮಂಗಳೂರು (ಜು.22): ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಮೇಲೆ ಹಲ್ಲೆ ನಡೆಸಿದ ತಂಡ. ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳನ್ನು ಹಿಂಬಾಲಿಸಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.
ಎ ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್(AJ Medical College Hospital Management Course) ನ ವಿದ್ಯಾರ್ಥಿಗಳು ಪಣಂಬೂರು ಬೀಚ್ ಗೆ ಒಟ್ಟೊಟ್ಟಿ ವಿಹಾರಕ್ಕೆ ತೆರಳಿದ್ದರು. 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿದ್ದರು.ಈ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದ 4 ಮಂದಿ ವಿದ್ಯಾರ್ಥಿನಿಯರು. ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದು ಹಲ್ಲೆ ನಡೆಸಿರುವ ತಂಡ
ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ವೇಳೆ ನಡೆದ ಘಟನೆ
Karnataka Budget 2023: ನೈತಿಕ ಪೊಲೀಸ್‌ಗಿರಿ, ಸುಳ್ಳು ಸುದ್ದಿಗೆ ಗುದ್ದು..!