
ಬೆಂಗಳೂರು, [ಮಾ.17]: ರಾಜ್ಯದಲ್ಲಿ ಮತ್ತೊಂದು ಕೊವಿಡ್-19 ಪತ್ತೆಯಾಗಿದ್ದು, ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಮಹಿಳೆಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ದುಬೈಯಿಂದ ಗೋವಾ ಮೂಲಕ ಮಾರ್ಚ್ 9 ರಂದು ಬೆಂಗಳೂರಿಗೆ ಬಂದಿದ್ದ ಮಹಿಳೆಗೆ ಕೊರೋನಾ ವೈರಸ್ ಸೋಂಕು ಹರಡಿದೆ. ಇಂದು [ಮಂಗಳವಾರ] ರಾಜ್ಯ ಆರೋಗ್ಯ ಇಲಾಖೆ ಕೊರೊನಾ ಮೀಡಿಯಾ ಬುಲೆಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ಮತ್ತೊಂದು ಹೊಸ ಪ್ರಕರಣ ಬೆಳಕಿಗೆ ಬಂದಿರುವ ಬಗ್ಗೆ ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯದಲ್ಲಿ 11 ಕೊರೊನಾ ಕೇಸ್ಗಳು ಬೆಳಕಿಗೆ ಬಂದಂತಾಗಿದೆ.
ಕೊರೋನಾ ಗೆದ್ದ ಬೆಂಗ್ಳೂರು ಟೆಕ್ಕಿ ಫ್ಯಾಮಿಲಿ, ವೈದ್ಯರೇ ಶಹಬ್ಬಾಸ್
ರಾಜ್ಯ ಸರ್ಕಾರ ಮಾಹಿತಿ ಪ್ರಕಾರ 67 ವರ್ಷದ ವೃದ್ಧೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಇವರು ಮಾರ್ಚ್ 9 ರಂದು ದುಬೈನಿಂದ ಗೋವಾಗಿ ಬಂದು ಬೆಂಗಳೂರಿಗೆ ಆಗಮಿಸಿದ್ದರು.
ಕೊರೊನಾ ಸೋಂಕು ಪತ್ತೆ ಆಗುವ ಮೊದಲು ಅವರನ್ನ ಮನೆಯಲ್ಲಿಯೇ ಇರಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಅವರನ್ನ ನಗರದಲ್ಲಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು 5 ಮಂದಿ ಕುಟುಂಬಸ್ಥರು ಸೇರಿದಂತೆ ಒಟ್ಟು 21 ಮಂದಿಯನ್ನ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರೆಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ