ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಮತ್ತೊಂದು ಸ್ಫೋಟಕ ಮಾಹಿತಿ

Kannadaprabha News   | Kannada Prabha
Published : Aug 27, 2025, 04:44 AM IST
Dharmasthala Mask Man Chinnayya

ಸಾರಾಂಶ

ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಮಂಗಳೂರು/ಬೆಳ್ತಂಗಡಿ : ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಸೌಜನ್ಯ ಪ್ರಕರಣ ಮುಂದಿಟ್ಟುಕೊಂಡು ಸ್ವಾಮೀಜಿಯನ್ನು ಈ ಗ್ಯಾಂಗ್ ಭೇಟಿ ಮಾಡಿ, ಇಡೀ ಪ್ರಕರಣವನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿತ್ತು. ಸೌಜನ್ಯ ಪ್ರಕರಣದ ರೀತಿಯಲ್ಲೇ ಶವಗಳನ್ನು ಹೂತಿರುವ ಕೇಸ್ ಇದು. ಧರ್ಮಸ್ಥಳದಲ್ಲಿ ನಿರಂತರವಾಗಿ ಈ ರೀತಿ ಪ್ರಕರಣಗಳು ನಡೆಯುತ್ತಿದೆ ಎಂದು ಸ್ವಾಮೀಜಿ ಮುಂದೆ ವಿವರಣೆ ನೀಡಿತ್ತು ಎಂದು ಹೇಳಲಾಗಿದೆ.

ಇದೊಂದು ಹಿಂದೂ ವಿರೋಧಿ ಹೋರಾಟ ಎಂದು ಗುರುತಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಸ್ವಾಮೀಜಿಯನ್ನು ಭೇಟಿ ಮಾಡಿದ ತಂಡ, ಸರ್ಕಾರಕ್ಕೆ ಒತ್ತಡ ಹೇರಲು ಮುಂದಾಗಿತ್ತು. ಸ್ವಾಮೀಜಿ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ತಮ್ಮ ಯೋಜನೆಯಂತೆಯೇ ಮುಂದೆ ಸಾಗಲು ಪ್ಲ್ಯಾನ್ ಮಾಡಿತ್ತು. ಸ್ವಾಮೀಜಿ ಮೂಲಕ ಸರ್ಕಾರಕ್ಕೆ ಒತ್ತಡ ಹಾಕುವುದು, ಈ ಹೋರಾಟದಲ್ಲಿ ಇಡೀ ಹಿಂದೂ ಸಮುದಾಯ ತಮ್ಮ ಜೊತೆ ಇದೆ ಎಂದು ಬಿಂಬಿಸಲು ಪ್ಲ್ಯಾನ್ ಮಾಡಲಾಗಿತ್ತು ಎನ್ನುವ ಮಾಹಿತಿಯನ್ನು ಚಿನ್ನಯ್ಯ ಬಯಲು ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

200 ಪುಟ ದಾಖಲೆ ಸಲ್ಲಿಸಿದ ಸಮೀರ್‌

ಧರ್ಮಸ್ಥಳ ದೇವಸ್ಥಾನದ ವಿರುದ್ಧ ಎಐ ಟೂಲ್‌ ಬಳಸಿ ನಿಂದನಾತ್ಮಕ ವಿಡಿಯೋ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಠಾಣೆಗೆ ಹಾಜರಾದ ವೇಳೆ ‘ದೂತ’ ಯೂಟ್ಯೂಬ್‌ ಚಾನೆಲ್‌ನ ಸಮೀರ್‌, 200ಕ್ಕೂ ಅಧಿಕ ಪುಟಗಳ ದಾಖಲೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ತಾನು ಕೂಡ ದಾಖಲೆ ಇಟ್ಟುಕೊಂಡೇ ವಿಡಿಯೋ ಮಾಡಿರುವ ಬಗ್ಗೆ ಸಮೀರ್‌ ಎಸ್‌ಐಟಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಮೀರ್‌ ಸಲ್ಲಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದು, ಅದರ ಸತ್ಯಾಸತ್ಯತೆ ಪರಿಶೀಲನೆಗೆ ಎಸ್‌ಐಟಿ ಮುಂದಾಗಿದೆ. ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ಗೆ ಎಸ್‌ಐಟಿ ತನಿಖಾಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌