ಬಿಟ್‌ ಕಾಯಿನ್ ಹಗರಣ: ಮತ್ತೊಬ್ಬ ಇನ್ಸ್‌ಪೆಕ್ಟರ್‌ ಅರೆಸ್ಟ್‌

By Kannadaprabha NewsFirst Published Feb 29, 2024, 6:12 AM IST
Highlights

ಕಡೂರು ಪೊಲೀಸ್‌ ತರಬೇತಿ ಶಾಲೆಯ ಇನ್ಸ್‌ಪೆಕ್ಟ‌ರ್ ಲಕ್ಷ್ಮೀ ಕಾಂತಯ್ಯ ಬಂಧಿತ. ಈ ಬಿಟ್ ಕಾಯಿನ್ ಹಗರಣ ನಡೆದಾಗ ಲಕ್ಷ್ಮೀಕಾಂತಯ್ಯ ಸಿಸಿಬಿ ತನಿ ಖಾಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಗರಣದ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ ಬುಧವಾರ ವಿಚಾರಣೆಗೆ ಹಾಜರಾಗಿದ್ದ ಲಕ್ಷ್ಮೀ ಕಾಂತಯ್ಯ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. 

ಬೆಂಗಳೂರು(ಫೆ.29): ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ ಕಾಯಿನ್ ಹಗರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಬ್ಬ ಇನ್ಸ್ ಪೆಕ್ಟರ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಕಡೂರು ಪೊಲೀಸ್‌ ತರಬೇತಿ ಶಾಲೆಯ ಇನ್ಸ್‌ಪೆಕ್ಟ‌ರ್ ಲಕ್ಷ್ಮೀ ಕಾಂತಯ್ಯ ಬಂಧಿತ. ಈ ಬಿಟ್ ಕಾಯಿನ್ ಹಗರಣ ನಡೆದಾಗ ಲಕ್ಷ್ಮೀಕಾಂತಯ್ಯ ಸಿಸಿಬಿ ತನಿ ಖಾಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಗರಣದ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ ಬುಧವಾರ ವಿಚಾರಣೆಗೆ ಹಾಜರಾಗಿದ್ದ ಲಕ್ಷ್ಮೀ ಕಾಂತಯ್ಯ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. 

ಬಳಿಕ 1ನೇ ಎಸಿ ಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಕೆಲ ದಿನಗಳ ಹಿಂದೆ ಇದೇ ಬಿಟ್ ಕಾಯಿನ್ ಹಗರಣ ಸಂಬಂಧ ಇನ್ಸ್‌ಪೆಕ್ಟರ್‌ ಪ್ರಶಾಂತ್‌ಬಾಬು ಮತ್ತು ಸೈಬರ್ ತಜ್ಞ ಸಂತೋ ಷ್‌ನನ್ನು ಎಸ್‌ಐಟಿ ಅಧಿಕಾರಿ ಗಳು ಬಂಧಿಸಿದ್ದರು. ಇದರ ಬೆನ್ನಲ್ಲೇ ಆರೋಪಿಲಕ್ಷ್ಮೀಕಾಂತ ಯ್ಯನನ್ನು ಬಂಧಿಸಿ ವಿಚಾರ ಣೆಗೆ ಒಳಪಡಿಸಿದ್ದಾರೆ.

Latest Videos

ಬಿಟ್‌ ಕಾಯಿನ್ ಹಗರಣದ ಬಂಧಿತ ಪೊಲೀಸ್‌ ಅಧಿಕಾರಿಗೆ ಕೋರ್ಟ್‌ನಿಂದ ಛೀಮಾರಿ, ಜಾಮೀನು ನಿರಾಕರಣೆ

ಬಿಟ್ ಕಾಯಿನ್ ಮತ್ತು ಡ್ರಗ್ಸ್ ಪ್ರಕರಣ ದಲ್ಲಿ ಅಂದುಸಿಸಿಬಿತನಿಖಾಧಿಕಾರಿಗಳಾಗಿದ್ದ ಇನ್ಸ್ಪೆಕ್ಟರ್‌ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ, ಚಂದ್ರಾಧರ ಹಾಗೂ ಶ್ರೀಧರ್ ಕೆ.ಪೂಜಾರ್ ಹಾಗೂ ಎಚ್‌ಎಸ್ ಆರ್ ಲೇಔಟ್‌ನ ಜಿಸಿಐಡಿ ಟೆಕ್ನಾಲಜಿಸ್ ಪ್ರೈವೆಟ್ ಲಿಮಿಟೆಡ್‌ನ ಸಿಇಒ ಎಸ್. ಸಂತೋಷ್ ಕುಮಾರ್ ವಿರುದ್ಧ ಸಾಕ್ಷ್ಯಾ ಧಾರಗಳ ನಾಶ ಆರೋಪದಡಿ ಎಸ್‌ಐಟಿ ಎಫ್‌ಐಆ‌ರ್ ದಾಖಲಿಸಿತ್ತು.

ಅಕ್ರಮ ಬಂಧನದಲ್ಲಿರಿಸಿದ್ದ ಆರೋಪ?:

ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣ ಸಂಬಂಧ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇ ವಲಾನ ಬಂಧನವಾಗಿತ್ತು. ಈ ಬಿಟ್ ಕಾಯಿನ್ ಬಗ್ಗೆ ತನಿಖೆ ಮಾಡಲು ಸಿಸಿಬಿ ಪ್ರಕರಣ ವಹಿಸಲಾಗಿತ್ತು. ಅಂದು ಸಿಸಿಬಿ ತನಿಖಾಧಿಕಾರಿಗಳಾಗಿದ್ದ ಲಕ್ಷ್ಮೀಕಾಂ ತಯ್ಯ ಹಾಗೂ ಇತರರು ಆರೋಪಿಗಳಾದ ಶ್ರೀಕಿ ಮತ್ತು ರಾಬಿನ್‌ನನ್ನು ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಸೈಬರ್ ತಜ್ಞ ಸಂತೋಷ್ ಸಹಾಯದಿಂದ ಆರೋಪಿಗಳ ವ್ಯಾಲೆಟ್‌ನಲ್ಲಿದ್ದ ಬಿಟ್ ಕಾಯಿನ್‌ಗಳನ್ನು ವರ್ಗಾವಣೆ ಮಾಡಿಕೊಂಡಿದ್ದರು.

click me!