ಚಿತ್ರದುರ್ಗದ ಮುರುಘಾ ಮಠದ ಶಿವರಾತ್ರಿ ಮುರುಘಾ ರಾಜೇಂದ್ರ ಸ್ವಾಮೀಜಿ ವಿರುದ್ಧ ಮತ್ತಷ್ಟು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಾರಿ ಮಠದಲ್ಲಿ ಕೆಲಸಗಾರರ ಮಕ್ಕಳೇ ದೂರು ಕೊಟ್ಟಿದ್ದು, 7 ಜರ ಮೇಲೆ ಎಫ್‌ಐಆರ್ ದಾಖಲಾಗಿದೆ.
ವರದಿ: ಮಧು.ಎಂ.ಚಿನಕುರಳಿ, ಏಷ್ಯಾನೆಟ್ ಸುವರ್ಣನ್ಯೂಸ್
ಚಿತ್ರದುರ್ಗ (ಅ.14): ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತಷ್ಟು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಾರಿ ಮಠದಲ್ಲಿ ಕೆಲಸಗಾರರ ಮಕ್ಕಳೇ ದೂರು ಕೊಟ್ಟಿದ್ದು, 7 ಜರ ಮೇಲೆ ಎಫ್‌ಐಆರ್ ದಾಖಲಾಗಿದೆ. ಒಡನಾಡಿ ಸಂಸ್ಥೆಯ ನೆರವು ಅರಸಿ ಬಂದ ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿ ನಜರ್‌ಬಾದ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಸಿದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೈಸೂರಿನಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಶ್ರೀಗಳ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಬೃಹನ್ ಮಠದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿ ಕೆಲಸದಾಕೆಯ ಇಬ್ಬರು ಮಕ್ಕಳು ಸೇರಿ ನಾಲ್ಕು ಮಕ್ಕಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆಗಿರುವ ಬಗ್ಗೆ ದೂರು ನೀಡಲಾಗಿದೆ. ಯುವತಿ ಹಾಗೂ ಆಕೆಯ ತಾಯಿ ಮೈಸೂರಿನ ಒಡನಾಡಿ ಸಂಸ್ಥೆ ಮುಂದೆ ತಮ್ಮ ನೋವು ತೋಡಿಕೊಂಡಿದ್ದು, ನಜರ್‌ಬಾದ್ನಲ್ಲಿರುವ ಮಕ್ಕಳ್ಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿ ತಮ್ಮ ದೂರು ದಾಖಲಿಸಿದ್ದರು. ಅಧಿಕಾರಿಗಳ ಸಮ್ಮುಖದಲ್ಲಿ ನಜರ್‌ಬಾದ್ ಠಾಣೆಗೆ ಹಾಜರಾದ ಮಗು ಹಾಗೂ ತಾಯಿ 2019 ರಿಂದ ಶ್ರೀಗಳು ನಾಲ್ಕು ಮಕ್ಕಳಿಗರ ನಡೆಸಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಿದರು. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಮೈಸೂರಿನ ನಜರ್‌ಬಾದ್ ಠಾಣೆ ಪೊಲೀಸರು ತಕ್ಷಣ ಎಫ್‌ಐಆರ್ ದಾಖಲಿಸಿ, ಪ್ರಕ್ರರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ.
undefined
ಇನ್ನು ಮಕ್ಕಳಿಗೆ ರಕ್ಷಣೆ ನೀಡಿರುವ ಒಡನಾಡಿ ಸಂಸ್ಥೆ ಮುಖ್ಯಸ್ಥರು ತನಿಖೆ ಬಗ್ಗೆ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಎರಡನೇ ಪ್ರಕರಣ ಕೂಡ ಮೊದಲನೇ ಪ್ರಕರಣದ ರೀತಿ ಇದೆ. ಮಠದಲ್ಲಿದ್ದ ಮಕ್ಕಳಿಗೆ ಕೌನ್ಸಿಲಿಂಗ್ ಮಾಡಿದ್ರೆ ಇನ್ನಷ್ಟು ಪ್ರಕರಣಗಳು ಹೊರಬರುತ್ತಿತ್ತು. ಮಠದಲ್ಲಿ ಇನ್ನಷ್ಟು ವ್ಯಕ್ತಿಗಳನ್ನ ರಕ್ಷಣೆ ಮಾಡುತ್ತಿದ್ದು, ನ್ಯಾಯಾಲಯ ಅಥವ ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ಆಗಲಿ ಹಾಗೂ ಮಕ್ಕಳು ಮೈಸೂರಿನಲ್ಲೇ ಇರಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಒಟ್ಟಾರೆ ಮುರುಘಾ ಶ್ರೀಗಳ ವಿರುದ್ಧ ಮತ್ತೆ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮತ್ತಿಬ್ಬರಿ ಆರೋಪಿಗಳು ಸೇರಿಕೊಂಡಿಧದಾರೆ. ಸರಿಯಾದ ತನಿಖೆ ಆದರೆ ಮತ್ತಷ್ಟು ಆರೋಪಿಗಳು ಸಿಕ್ಕಿ ಬೀಳುತ್ತಾರೆ ಎನ್ನುವುದು ಸತ್ಯವಾಗಿದೆ.
ಜೈಲಿನಿಂದಲೇ ಪವರ್ ಆಫ್ ಅಟಾರ್ನಿ ಕಾರ್ಯಕರ್ತಕ್ಕೆ ಹೈಕೋರ್ಚ್ ಅನುಮತಿ:
ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬ್ರಹನ್ಮಠದ ವಿದ್ಯಾಪೀಠಕ್ಕೆ ಸೇರಿದ ಸಂಸ್ಥೆಗಳಿಗೆ ಸಂಬಂಧಿಸಿದ ಪವರ್ ಆಫ್ ಅಟಾರ್ನಿಯನ್ನು ಜೈಲಿನಿಂದಲೇ ಕಾರ್ಯಗತಗೊಳಿಸಲು ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಚ್ ಅನುಮತಿ ನೀಡಿದೆ.
ಈ ಕುರಿತು ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಅನುಮತಿ ನೀಡುವ ಸಂಬಂಧ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.
ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಅನುಮತಿ ನೀಡುವಂತೆ ಕೋರಿ ಜೈಲಿನ ಅಧೀಕ್ಷಕರಿಗೆ ಅರ್ಜಿದಾರರು ಮನವಿ ಸಲ್ಲಿಸಬೇಕು. ಆ ಮನವಿಯನ್ನು ಅಧೀಕ್ಷಕರು ಪರಿಗಣಿಸಬೇಕು. ಪವರ್ ಆಫ್ ಅಟಾರ್ನಿ ಕಾರ್ಯಗತ ಮಾಡಿದ ನಂತರ ಅದರ ದಾಖಲೆಗಳನ್ನು ತನಿಖಾಧಿಕಾರಿಗಳು ಪಡೆದು, ಅರ್ಜಿದಾರರ ವಿರುದ್ಧ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
Chitradurga: ಮುರುಘಾ ಮಠದಲ್ಲಿದ್ದ ಮುರುಘಾ ಶ್ರೀ ಫೋಟೋಗಳು ಕಳ್ಳತನ!
ವಿದ್ಯಾಪೀಠದ ಸಂಸ್ಥೆಗಳ ನೌಕರರು ಮತ್ತು ಇತರೆ ಸಿಬ್ಬಂದಿಗೆ ವೇತನ ವಿತರಿಸುವ ಸಂಬಂಧ ಚೆಕ್‌ಗಳಿಗೆ ಶರಣರು ಅ.3, 6 ಮತ್ತು 9ರಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿಯೇ ಸಹಿ ಮಾಡಬಹುದು ಎಂದು ಸೆ.30ರಂದು ಹೈಕೋರ್ಚ್ ಆದೇಶಿಸಿತ್ತು. ಅಲ್ಲದೆ, ಈ ಆದೇಶ ಅಕ್ಟೋಬರ್ ತಿಂಗಳಿಗೆ ವೇತನ ವಿತರಿಸುವುದಕ್ಕೆ ಮಾತ್ರ ಅನ್ವಯಿಸಲಿದೆ. ನೌಕರರಿಗೆ ವೇತನ ಪಾವತಿಸುವುದಕ್ಕೆ ಸಂಬಂಧಿಸಿದ ಚೆಕ್‌ಗಳನ್ನು ಬಿಟ್ಟು ಇತರೆ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ನೀಡಲಾಗಿಲ್ಲ ಎಂದು ಹೈಕೋರ್ಚ್ ಆದೇಶದಲ್ಲಿ ಸ್ಪಷ್ಟಪಡಿಸಿತ್ತು.
Murugha Mutt: ಮುರುಘಾ ಮಠದಲ್ಲಿ ಹೆಣ್ಣು ಮಗು ಪತ್ತೆ!
ಆದರೆ, ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡಿರಲಿಲ್ಲ. ಇದರಿಂದ ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೋರಿ ಶರಣರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಬುಧವಾರ ಅದರ ವಿಚಾರಣೆ ನಡೆಸಿದ ಹೈಕೋರ್ಚ್ ಈ ಮೇಲಿನ ಆದೇಶ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.