
ಬೆಂಗಳೂರು (ಡಿ.12) : ಮಾಂಡೌಸ್ ಚಂಡಮಾರುತದಿಂದಾಗಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ ರಾಜ್ಯಗಳು ತತ್ತರಿಸಿದ್ದು. ಚಂಡಮಾರುತದ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ. ಕಳೆದ ವಾರದಿಂದ ಬೆಂಗಳೂರು ಸೇರಿದಂತೆ ಹಲವೆಡೆ ನಿರಂತರ ಮಳೆಯಾಗುತ್ತಿದ್ದು, ವಾತಾವರಣದಲ್ಲಿ ತಾಪಮಾನ ಕಡಿಮೆಯಾಗಿ ತೀವ್ರ ಶೀತಗಾಳಿಗೆ ಜನರು ತತ್ತರಿಸಿ ಹೋಗಿದ್ದಾರೆ.
ಪ್ರಸ್ತುತ ಮಾಂಡೋಸ್ ಚಂಡಮಾರುತ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ, ಭಾರೀ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಹಾಗೂ ಅತಿ ಕಡಿಮೆ ತಾಪಮಾನವು ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರಿಯುವ ಸಾಧ್ಯತೆಯಿದ್ದು, ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಿಗೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Cyclone Mandous ; ಮಾಂಡೌಸ್ ಚಂಡಮಾರುತ ಎಫೆಕ್ಟ್; ಮಲೆನಾಡು ಗಡ ಗಡ !
ಈ ಹಿನ್ನೆಲೆಯಲ್ಲಿ ಮುಂಬರುವ ಚಳಿಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು (ನವಜಾತ ಶಿಶುಗಳು ಸೇರಿದಂತೆ) ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಎಚ್ಚರಿಕೆಯಿಂದ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಾರ್ವಜನಿಕರಿಗೆ ಕೆಲವು ಸಲಹೆಗಳನ್ನು ನೀಡಿದೆ.
ಏನು ಮಾಡಬೇಕು?
ಯಾವುದನ್ನು ಮಾಡಬಾರದು?
ಈ ಸಮಯದಲ್ಲಿ ಆರೋಗ್ಯದಲ್ಲಿ ಏರುಪೇರು ಆದಲ್ಲಿ ತಮ್ಮ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಸಲಹೆ ನೀಡಿದೆ.
ಮತ್ತೊಂದು ಚಂಡಮಾರುತ!
ಹೌದು, ಮಾಂಡೌಸ್ ಚಂಡಮಾರುತಕ್ಕೆ ತತ್ತರಿಸಿರುವ ರಾಜ್ಯಕ್ಕೆ ಮತ್ತೊಂದು ಆತಂಕ ಎದುರಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ ಪರಿಚಲನೆ ರೂಪುಗಳ್ಳೊವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತ ಕೂಡ ಭಾರತದ ಕರಾವಳಿಯಿಂದ ಪಶ್ಚಿಮ ಕಡೆಗೆ ಚಲಿಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳ್ಳಾಲ: ಮ್ಯಾಂಡಸ್ ಚಂಡಮಾರುತ, ಪ್ರಕ್ಷುಬ್ಧ ಸಮುದ್ರಕ್ಕೆ ಇಳಿದ ವ್ಯಕ್ತಿ ನೀರುಪಾಲು
ಹೊಸ ಚಂಡಮಾರುತದಿಂದ ತಮಿಳುನಾಡು, ಕೇರಳದಲ್ಲಿ ಮತ್ತಷ್ಟು ಭೀಕರ ಮಳೆ ಸುರಿಸಲಿದ್ದು ಈ ಚಂಡಮಾರುತವು ಡಿಸೆಂಬರ್ 14, 15ರಂದು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಶುರುವಾಗಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕ-ಕರಾವಳಿಯಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ