ಮಂಗಳೂರು ಗಲಭೆ: ಕುಮ್ಮಕ್ಕು ನೀಡಿದವರಿಗೆ ಸಿಕ್ತು ನೋಟಿಸ್‌!

By Suvarna News  |  First Published Dec 30, 2019, 8:48 AM IST

ಪೌರತ್ವ ಕಾರ್ಯ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಮಂಗಳೂರು ಗಲಭೆ: ಪ್ರಚೋದನಾಕಾರಿ ಸಂದೇಶಕ್ಕೆ ನೋಟಿಸ್‌| 


ಮಂಗಳೂರು[ಡಿ.30]: ಸಾಮಾಜಿಕ ಜಾಲತಾಣದ ಮೂಲಕ ಪ್ರಚೋದನಕಾರಿ ಸಂದೇಶ ಕಳುಹಿಸಿ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಡಿ ಮಂಗಳೂರು ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ನೋಟಿಸ್‌ ಕಳುಹಿಸಿದ್ದಾರೆ.

ಇತ್ತೀಚೆಗೆ ಪೌರತ್ವ ಕಾರ್ಯ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಗಲಭೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶಗಳು ಹರಿದಾಡುತ್ತಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ, ಸೈಬರ್‌ ಪೊಲೀಸರ ಮೂಲಕ ತನಿಖೆಗೆ ಆದೇಶಿಸಿದ್ದರು.

Tap to resize

Latest Videos

ತನಿಖೆ ವೇಳೆ ಹಲವು ಆರೋಪಿಗಳ ಸುಳಿವು ಲಭ್ಯವಾಗಿದ್ದು, ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಕಳುಹಿಸಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ಯಾರು ಪ್ರಚೋದನಕಾರಿ ಸಂದೇಶಗಳನ್ನು ಅಥವಾ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ಎಚ್ಚರಿಸಿದ್ದಾರೆ.

click me!