
ಉಡುಪಿ (ಮೇ.9): ರಾಜ್ಯಾದ್ಯಂತ ಒಂದೆಡೆ ಮುಸ್ಲಿಂ ಸಮುದಾಯದವರು ಭಾರತೀಯ ಸೈನಿಕರಿಗಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರೆ, ಇತ್ತ ಕೆಲವು ಮತಾಂಧ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ದೇಶ ವಿರೋಧಿ ಹೇಳಿಕೆಗಳನ್ನು ಹಂಚಿಕೊಂಡು ಹಿಂದೂ-ಮುಸ್ಲಿಂ ಸೌಹಾರ್ದತೆಯನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ. ಕೋಲಾರ ಮತ್ತು ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳು ಬೆಳಕಿಗೆ ಬಂದ ಬೆನ್ನಲ್ಲೇ, ಇದೀಗ ಉಡುಪಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಮಹಾಲಿಂಗ ಅಡ್ಯಂತ್ಯಾಯ ಮೆಮೋರಿಯಲ್ ಇಂಜಿನಿಯರಿಂಗ್ ಕಾಲೇಜಿನ ಸರೋಜಿನಿ ಹಾಸ್ಟೆಲ್‌ನ ಗೋಡೆಯ ಮೇಲೆ ದೇಶವಿರೋಧಿ ಬರಹಗಳು ಕಾಣಿಸಿಕೊಂಡಿವೆ. 'ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ್ ಬೋಲ್' 'ಮುಸ್ಲಿಂ ಜಿಂದಾಬಾದ್, ಹಿಂದೂ ಫಕ್ ಆಫ್" ಎಂಬ ಘೋಷಣೆಗಳನ್ನು ಗೋಡೆಯ ಮೇಲೆ ಬರೆಯಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬರಹವನ್ನು ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಬರೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯನ್ನು ಗುರುತಿಸಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆಯಿಂದ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದ್ದು, ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಈ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ.
ಈ ಘಟನೆಯಿಂದ ರಾಜ್ಯದಲ್ಲಿ ಧಾರ್ಮಿಕ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತೆ ಅಗತ್ಯವಿದೆ ಎಂದು ಸ್ಥಳೀಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ