
ಮೂಲ್ಕಿ (ಜ.9): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಯಕ್ಷಗಾನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅನುಪಮವಾದುದು. ಹತ್ತು ವರುಷಗಳ ವರೆಗೆ ಯಕ್ಷಗಾನ ಸೇವೆ ನೋಂದಣಿ ಆಗಿರುವುದು, ವಾರ್ಷಿಕ ಹತ್ತು ಕೋಟಿ ರುಪಾಯಿಗಳನ್ನು ಖರ್ಚು ಮಾಡುತ್ತಿರುವುದು ಅಭಿನಂದನೀಯ ಎಂದು ಸುಪ್ರಿಂಕೋರ್ಟ್ ನಿವೃತ್ತ ನ್ಯಾಯಾಧೀಶ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಹೇಳಿದರು.
ಅವರು ಶನಿವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೂಹ ವಿದ್ಯಾಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ನುಡಿಹಬ್ಬದಲ್ಲಿ ಮಾತನಾಡಿದರು.
ಕಟೀಲು ದೇವಸ್ಥಾನಕ್ಕೆ ಬಂದರೆ ನಮ್ಮ ಮನೆಗೆ ಬಂದ ಅನುಭವವಾಗುತ್ತದೆ. ಬಾಲ್ಯದಲ್ಲಿ ಕಟೀಲಿಗೆ ಸಾಕಷ್ಟು ಬಾರಿ ಭೇಟಿ ನೀಡಿದ್ದೇನೆ. ಇಲ್ಲಿನ ಯಕ್ಷಗಾನ ಮೇಳಗಳ ಆಟ ನೋಡಿದ್ದೇನೆ. ದೇವಿ ಮಹಾತ್ಮೆ ಪ್ರಸಂಗ ಪ್ರಸಿದ್ಧವಾದುದು. ಇದನ್ನೂ ನೋಡಿದ್ದೇನೆ ಎಂದರು.
ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ಕಟೀಲಿನ ಪ್ರಕೃತಿ ಹರಿಯುವ ನಂದಿನಿಯಂತೆ ಪರಿಶುದ್ಧವಾಗಿದೆ. ವಿವಿಧ ಕಲಾಪ್ರಕಾರಗಳು ಕರ್ನಾಟಕದ ಸಾಂಸ್ಕೃತಿಕತೆಯನ್ನು ಹೆಚ್ಚಿಸಿವೆ ಎಂದು ಅವರು ಹೇಳಿದರು.ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ರಾಜ್ಯಪಾಲರಾದ ಎಸ್. ಅಬ್ದುಲ್ ನಜೀರ್ ಅಬ್ದಲ್ ಕಲಾಂ ಅವರಂತೆ, ಸರಳ ವ್ಯಕ್ತಿತ್ವದ ಮಹಾ ಸಾಧಕರಾಗಿದ್ದು, ಅಪ್ರತಿಮ ರಾಷ್ಟ್ರಭಕ್ತರಾಗಿದ್ದಾರೆ ಎಂದರು.ನುಡಿಹಬ್ಬ ಸಮ್ಮೇಳನಾಧ್ಯಕ್ಷ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ, ದೇವಳದ ಆಡಳಿತ ಮಂಡಳಿಯ ಕಿಶೋರ್‌ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ದೇವಳದ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ವೇದಿಕೆಯಲ್ಲಿದ್ದರು.ಅರ್ಚಕ ಕಮಲಾದೇವಿಪ್ರಸಾದ ಆಸ್ರಣ್ಣ ಸ್ವಾಗತಿಸಿದರು. ಉಪನ್ಯಾಸಕಿ ಶೈಲಜಾ ನಿರೂಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ