ಕೊಂಕಣ ರೈಲ್ವೆ ಅನೇಕ ವರ್ಷಗಳಿಂದ ನಷ್ಟದಲ್ಲಿದೆ. ಹೀಗಾಗಿ ಈ ವಿಭಾಗದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಆದ್ದರಿಂದ ಈ ವಿಭಾಗದ ಆಡಳಿತವನ್ನು ರೈಲ್ವೆ ಇಲಾಖೆ ನೇರವಾಗಿ ವಹಿಸಿಕೊಳ್ಳುವಂತೆ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಉಡುಪಿ (ಜೂ.05): ಕೊಂಕಣ ರೈಲ್ವೆ ಅನೇಕ ವರ್ಷಗಳಿಂದ ನಷ್ಟದಲ್ಲಿದೆ. ಹೀಗಾಗಿ ಈ ವಿಭಾಗದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಆದ್ದರಿಂದ ಈ ವಿಭಾಗದ ಆಡಳಿತವನ್ನು ರೈಲ್ವೆ ಇಲಾಖೆ ನೇರವಾಗಿ ವಹಿಸಿಕೊಳ್ಳುವಂತೆ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಅವರು ಶನಿವಾರ ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿಯ ಇಂದ್ರಾಳಿ ರೈಲ್ವೆ ಬ್ರಿಡ್ಜ್‌ಗೆ ಬೇಕಾದ ಕಬ್ಬಿಣದ ಭೀಮ್‌ಗಳನ್ನು ಹುಬ್ಬಳ್ಳಿಯಲ್ಲಿ ತಯಾರಿಸಲಾಗುತ್ತಿದ್ದು, ನಂತರ ಇಲ್ಲಿಗೆ ತಂದು ಜೋಡಿಸಲಾಗುತ್ತದೆ.
ಈ ಕಾಮಗಾರಿ ಡಿಸೆಂಬರೊಳಗೆ ಪೂರ್ಣಗೊಳ್ಳಲಿದೆ ಎಂದವರು ಹೇಳಿದರು. ಸಿದ್ದರಾಮಯ್ಯಮುಖ್ಯಮಂತ್ರಿ ಆದ ತಕ್ಷಣ ಹಿಂದಿನ ಸರ್ಕಾರದ ಟೆಂಡರ್‌ಗಳಿಗೆ ತಡೆ ನೀಡಿದ್ದಾರೆ. ಇದರಿಂದ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳೂ ಸ್ಥಗಿತಗೊಂಡಿದೆ. ಹೀಗಾಗಿ ತೀರಾ ಅತ್ಯಗತ್ಯವಾಗಿರುವ ಜಲ ಜೀವನ್ ಮಿಷನ್ ಮುಂತಾದ ಕೇಂದ್ರದ ಯೋಜನೆಗಳೂ ನಡೆಯುತ್ತಿಲ್ಲ. ಆದ್ದರಿಂದ ಇಂತಹ ಯೋಜನೆಗಳನ್ನು ಸಿಎಂ ತಮ್ಮ ಆದೇಶದಿಂದ ಹೊರಗಿಡಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮುಂತಾದವರಿದ್ದರು.
undefined
ಗುಂಡ್ಲುಪೇಟೆಯನ್ನು ಮಾದರಿ ಕ್ಷೇತ್ರ ಮಾಡುವುದೇ ಗುರಿ: ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್
ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸುವಂತೆ ಒತ್ತಾಯ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣರನ್ನು ಕೂಡಲೇ ಬಂಧಿಸಬೇಕು. ಕಳೆದ ಅನೇಕ ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ನ್ಯಾಯ ದೊರಕಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪ್ರೇಮಾ ಪಾಟೀಲ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕುಸ್ತಿಪಟುಗಳ ಮೇಲೆ ಫೆಡರೇಶನ್ ಅಧ್ಯಕ್ಷರಿಂದ ನಡೆದ ಲೈಂಗಿಕ ದೌರ್ಜನ್ಯ ಖಂಡನೀಯ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಡೆದ ಪದಕವನ್ನೇ ಗಂಗೆಗೆ ಎಸೆಯಲು ಮುಂದಾಗಿರುವುದು ಆ ಕುಸ್ತಿಪಟುಗಳು ಎಷ್ಟುನೋವು ಅನುಭವಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದರೂ ಇದುವರೆಗೆ ಕೇಂದ್ರ ಸರ್ಕಾರ ಆರೋಪಿ ಬ್ರಿಜ್ ಭೂಷಣರನ್ನು ಬಂಧಿಸಿಲ್ಲ ಎಂದರು.
ಪ್ರತಿಭಟನೆ ಮಾಡುತ್ತಿರುವ ಕುಸ್ತಿಪಟುಗಳಿಗೆ ರಕ್ಷಣೆ ಮತ್ತು ನ್ಯಾಯ ಇಲ್ಲದಂತಾಗಿದೆ. ಅವರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅವರೊಂದಿಗೆ ದೇಶದ ಎಲ್ಲ ಮಹಿಳೆಯರು ಇದ್ದೇವೆ. ನೀವು ಧೈರ್ಯದಿಂದ ಹೋರಾಟ ಮುಂದುವರಿಸಬೇಕು. ಫೆಡರೇಶನ್ ಅಧ್ಯಕ್ಷರನ್ನು ಬಂಧಿಸದಿದ್ದರೆ ಬೀದಿಗಿಳಿದು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಡು ಪ್ರಾಣಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಿ: ಎಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಇದರ ಪ್ರಯೋಜನಗಳನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ 5ರಲ್ಲಿ ಕಾಂಗ್ರೆಸ್ ಗೆದ್ದಿದೆ. ಆದರೆ, ಜಿಲ್ಲೆಯ ಒಬ್ಬರಿಗೂ ಮಂತ್ರಿ ಸ್ಥಾನ ಕೊಡದಿರುವುದು ಬೇಸರ ತಂದಿದೆ. ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಶ್ರೀನಿವಾಸ ಮಾನೆ ಇವರೆಲ್ಲ ಹಲವು ಬಾರಿ ಗೆದ್ದು ಬಂದಿರುವ ಹಿರಿಯರಾಗಿದ್ದಾರೆ. ಇವರಲ್ಲಿ ಕನಿಷ್ಠ ಇಬ್ಬರಿಗಾದರೂ ಮಂತ್ರಿ ಸ್ಥಾನ ಕೊಡಬೇಕು ಎಂದು ಅವರು ಒತ್ತಾಯಿಸಿದರು.