ಡಿನೋಟಿಫಿಕೇಷನ್‌ ಕೇಸಲ್ಲಿ ಎಚ್.ಡಿ.ಕುಮಾರಸ್ವಾಮಿ ಕೋರ್ಟ್‌ಗೆ ಹಾಜರು

By Kannadaprabha NewsFirst Published May 9, 2024, 6:38 AM IST
Highlights

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರಾದರು. 

ಬೆಂಗಳೂರು (ಮೇ.09): ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರಾದರು. ಬುಧವಾರ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣ ಸಂಬಂಧ ವಿಚಾರಣೆ ಎದುರಿಸಿದರು. ಈ ವೇಳೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮೇ 29ಕ್ಕೆ ಮುಂದೂಡಿದೆ. 

ನ್ಯಾಯಾಲಯವು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿಖುದ್ದು ಹಾಜರಾದರು.ಹಲಗೆವಡೇರಹಳ್ಳಿಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ದೂರುದಾರ ಮಹಾದೇವಸ್ವಾಮಿ ಪ್ರಶ್ನಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ ತಿರಸ್ಕರಿಸಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ದೇವೇಗೌಡರ ಬಗ್ಗೆ ಲಘುವಾಗಿ ಮಾತಾಡಬೇಡಿ: ‘ತಂದೆ-ತಾಯಿ ಬಾಂಧವ್ಯ ನಿಮಗೆ ಗೊತ್ತಿಲ್ಲದೇ ಇರಬಹುದು. ಆದರೆ ನಮಗೆ ಆ ಬಾಂಧವ್ಯ ಇದೆ. ಅವರಿಗೆ ಧೈರ್ಯ ತುಂಬಲು ಅವರ ಮನೆಗೆ ಹೋಗುತ್ತೇನೆ. ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕೀತು ಮಾಡಿದ್ದಾರೆ. ನಮ್ಮ ತಂದೆ-ತಾಯಿ ನೋವಿನಲ್ಲಿದ್ದಾರೆ. ಅವರನ್ನು ನೋಡಲು ಹೋದರೆ ಮುಖ್ಯಮಂತ್ರಿಯಾದವರು, ಪ್ರಜ್ವಲ್ ಮತ್ತು ರೇವಣ್ಣ ಅವರನ್ನು ರಕ್ಷಣೆ ಮಾಡಲು ದೇವೇಗೌಡರು ವಕೀಲರ ಜತೆ ಸಮಾಲೋಚನೆ ಮಾಡುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಾರೆ. 

ಕೇಂದ್ರ ಸರ್ಕಾರ ಪ್ರಜ್ವಲ್‌ ರೇವಣ್ಣಗೆ ರಕ್ಷಣೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

ಮನುಷ್ಯರೇನ್ರಿ ನೀವು? ಎಂದು ಟೀಕಾಪ್ರಹಾರ ನಡೆಸಿದರು. ಕುಮಾರಸ್ವಾಮಿ -ರೇವಣ್ಣ ಕುಟುಂಬದ ಸಂಘಟಿತ ಪಾಪ ಎಂದು ಹೇಳಿದ್ದಾರೆ. ನಮ್ಮ ಮನೆಗಳ ಮುಂದೆ ಇದ್ದ ಕ್ಯಾಮೆರಾಗಳ ವಿಡಿಯೋಗಳನ್ನು ತರಿಸಿ ನೋಡಿ. ಯಾವ ವಕೀಲರು ಬಂದಿದ್ದರು ಎನ್ನುವುದು ಗೊತ್ತಾಗುತ್ತದೆ. ತಂದೆ-ತಾಯಿ ಬಾಂಧವ್ಯ ನಿಮಗೆ ಗೊತ್ತಿಲ್ಲದೇ ಇಲ್ಲರಬಹುದು. ಆದರೆ ನಮಗೆ ಆ ಬಾಂಧವ್ಯ ಇದೆ. ಮಾತೆತ್ತಿದರೆ ದೇವೆಗೌಡರ ನಿವಾಸ ಎನ್ನುತ್ತೀರಿ. ಅದು ದೇವೆಗೌಡರ ನಿವಾಸ ಅಲ್ಲ. ಅದು ಅವರ ಮಗಳ ಮನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

click me!