ಗೃಹಜ್ಯೋತಿ ಯೋಜನೆ ಜಾರಿ ಬೆನ್ನಲ್ಲೇ ಗ್ರಾಹಕರಿಗೆ ಸರ್ಕಾರದಿಂದ ಮತ್ತೊಂದು ಗುಡ್‌ ನ್ಯೂಸ್‌ !

Published : Jun 18, 2023, 09:50 AM ISTUpdated : Jun 18, 2023, 10:14 AM IST
ಗೃಹಜ್ಯೋತಿ ಯೋಜನೆ ಜಾರಿ ಬೆನ್ನಲ್ಲೇ ಗ್ರಾಹಕರಿಗೆ ಸರ್ಕಾರದಿಂದ ಮತ್ತೊಂದು ಗುಡ್‌ ನ್ಯೂಸ್‌ !

ಸಾರಾಂಶ

ಜುಲೈ 1ರಿಂದ ಜಾರಿಯಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ'ಗೃಹ ಜ್ಯೋತಿ'ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಹಿನ್ನೆಲೆ ಬೆಸ್ಕಾಂ ಕಚೇರಿ ಹಾಗೂ ನಾಡಕಚೇರಿಗಳಲ್ಲಿ ಇಂದು ಕಾರ್ಯನಿರ್ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಬೆಂಗಳೂರು (ಜೂ.18) : ಜುಲೈ 1ರಿಂದ ಜಾರಿಯಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ'ಗೃಹ ಜ್ಯೋತಿ'ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಹಿನ್ನೆಲೆ ಬೆಸ್ಕಾಂ ಕಚೇರಿ ಹಾಗೂ ನಾಡಕಚೇರಿಗಳಲ್ಲಿ ಇಂದು ಕಾರ್ಯನಿರ್ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ.

ರಾಜ್ಯ ಸರ್ಕಾರ ಎರಡನೇ ಗ್ಯಾರಂಟಿಯಾಗಿರುವ ಗೃಹಲಕ್ಷ್ಮೀ ಯೋಜನೆ ಭಾನುವಾರದಿಂದಲೇ ಅರ್ಜಿ ಸಲ್ಲಿಸಲಾಗುತ್ತಿರುವ ಹಿನ್ನೆಲೆ, ರಜೆಯಾದ ದಿನವಾದ 18-06-2023 ಭಾನುವಾರದಂದು   ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ನಾಡಕಛೇರಿಗಳು 'ಕರ್ತವ್ಯದ ದಿನ'ವೆಂದು ಪರಿಗಣಿಸಿ ಕಾರ್ಯ ನಿರ್ವಹಿಸುವಂತೆ ಸೂಚನೆ ಹೀಗಾಗಿ ಇಂದು ಬೆಳಗ್ಗೆ ಬೆಳಿಗ್ಗೆ 11 ಗಂಟೆಯಿಂದಲೇ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ. 

ಸೇವಾ ಸಿಂಧು ಪೋರ್ಟಲ್​ನಲ್ಲಿನ ತಾಂತ್ರಿಕ ಕಾರಣಗಳಿಗಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಇದೀಗ ಎಲ್ಲವೂ ವ್ಯವಸ್ಥಿತವಾಗಿ ಸರಿಪಡಿಸಲಾಗಿದ್ದು, ಇಂದಿನಿಂದಲೇ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿ ಎಂದು ರಾಜ್ಯ ಸರ್ಕಾರ ತಿಳಿಸಿದೆ 

ಅರ್ಜಿ ಸಲ್ಲಿಸೋದು ಹೇಗೆ?

ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಬೆಸ್ಕಾಂ ಕಚೇರಿ, ನಾಡಕಚೇರಿ ಅರ್ಜಿಸಲ್ಲಿಸಬಹುದಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಹೋಗಿ ಇಲ್ಲಿದೆ ಲಿಂಕ್: https://sevasindhugss.karnataka.gov.in  ಎಲ್ಲ ಅಗತ್ಯ ದಾಖಲೆಗಳೊಂದಿಗೆ ನೀವು ಇಂಟರ್ ನೆಟ್ ಲ್ಯಾಪ್‌ಟಾಪ್ ಹೊಂದಿದ್ದೀರಾದರೆ ಮನೆಯಿಂದಲೇ ಸಲ್ಲಿಸಬಹುದಾಗಿದೆ. ಇನ್ನೂ ಈ ಯೋಜನೆ ಬಗ್ಗೆ ಗೊಂದಲ, ಹೆಚ್ಚಿನ ಮಾಹಿತಿ ಬೇಕಾದಲ್ಲಿ 1912 ಸಂಪರ್ಕಿಸಬಹುದಾಗಿದೆ.

ಗೃಹಜ್ಯೋತಿ ಜಾರಿಗೂ ಮುನ್ನ ವಿದ್ಯುತ್‌ ಬೆಲೆ ಏರಿಕೆ ಶಾಕ್! ಬಿಲ್‌ ದುಪ್ಪಟ್ಟು ಬರಲು ಇಲ್ಲಿದೆ ಕಾರಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್