ದತ್ತಪೀಠದ ಹಿಂದೂ ಅರ್ಚಕರಾಗಲು ಇಬ್ಬರು ಅರ್ಜಿ ಹಾಕಿದ್ದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಅರ್ಜಿ ಹಾಕಿದ್ದರು. ದತ್ತಜಯಂತಿಗೆ ತುರ್ತಾಗಿ, ತಾತ್ಕಾಲಿಕಕ್ಕೆ ಇಬ್ಬರು ಬೇಕಿದ್ದ ಕಾರಣ ಆ ಇಬ್ಬರನ್ನೇ ಸರ್ಕಾರ ದತ್ತಪೀಠಕ್ಕೆ ಹಿಂದೂ ಅರ್ಚಕರಾಗಿ ನೇಮಕ ಮಾಡಿ ಆದೇಶಿಸಿದೆ.
ಚಿಕ್ಕಮಗಳೂರು (ಡಿ.03): ಹಿಂದೂಗಳ ದಶಕಗಳ ಕನಸು ಹಾಗೂ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಿದ್ದು, ದತ್ತಜಯಂತಿಗಾಗಿ ದತ್ತ ಪೀಠಕ್ಕೆ ತಾತ್ಕಾಲಿಕವಾಗಿ ಹಿಂದೂ ಅರ್ಚಕರ ನೇಮಕವಾಗಿದೆ. ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸಬೇಕು ಎಂದು ಸುಮಾರು ಮೂರ್ನಾಲ್ಕು ದಶಕಗಳಿಂದಲೂ ಹಿಂದೂ ಸಂಘಟನೆಗಳು ಹೋರಾಡುತ್ತಿದ್ದರು. ಹೋರಾಟದ ಫಲವಾಗಿ ಇಂದು ರಾಜ್ಯ ಸರ್ಕಾರವು ದತ್ತಜಯಂತಿಗೆ ಹಿಂದೂ ಅರ್ಚಕರ ನೇಮಕ ಮಾಡಿದೆ. ಈ ವಿಷಯವು ಇದೀಗ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಗೆ ಡಬಲ್ ಖುಷಿ ತಂದಿದೆ. ಈ ಮೂಲಕ 2018ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಎಂದು ಹೇಳಿತ್ತು. ಅದರಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ.
ದತ್ತಪೀಠದ ಹಿಂದೂ ಅರ್ಚಕರಾಗಲು ಇಬ್ಬರು ಅರ್ಜಿ ಹಾಕಿದ್ದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಅರ್ಜಿ ಹಾಕಿದ್ದರು. ದತ್ತಜಯಂತಿಗೆ ತುರ್ತಾಗಿ, ತಾತ್ಕಾಲಿಕಕ್ಕೆ ಇಬ್ಬರು ಬೇಕಿದ್ದ ಕಾರಣ ಆ ಇಬ್ಬರನ್ನೇ ಸರ್ಕಾರ ದತ್ತಪೀಠಕ್ಕೆ ಹಿಂದೂ ಅರ್ಚಕರಾಗಿ ನೇಮಕ ಮಾಡಿ ಆದೇಶಿಸಿದೆ. ಆದರೆ ಈ ಆಯ್ಕೆ ತಾತ್ಕಾಲಿಕವಾಗಿದ್ದು, ಮೂರು ದಿನದ ದತ್ತಜಯಂತಿ ಕಾರ್ಯಕ್ರಮಕ್ಕಾಗಿ ಅಷ್ಟೇ ಆಗಿದೆ. ರಾಜ್ಯ ಸರ್ಕಾರದ ನಡೆಯನ್ನ ಸ್ವಾಗತಿಸಿದೆ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Chikkamagaluru: ದತ್ತಪೀಠ ವ್ಯವಸ್ಥಾಪನಾ ಸಮಿತಿ ರದ್ದುಪಡಿಸಿ: ಎಸ್‌ಡಿಪಿಐ
ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕಕ್ಕೆ ಕ್ರಮ: ದತ್ತಪೀಠದ ವಿಚಾರದಲ್ಲಿ ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷವು ಜನರಿಗೆ ನೀಡಿದ ಮಾತಿನಂತೆ ನಡೆದುಕೊಂಡಿದ್ದು, ಸಚಿವ ಸಂಪುಟ ಉಪಸಮಿತಿಯ ನಿರ್ಣಯದ ಶಿಫಾರಸುಗಳನ್ನು ಅಂಗೀಕರಿಸಿ ಆಡಳಿತ ಮಂಡಳಿ ರಚನೆ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಅರ್ಚಕರ ನೇಮಕಕ್ಕಿದ್ದ ಅಡೆತಡೆ ಈಗ ನಿವಾರಣೆಯಾಗಿದ್ದು, ಹಿಂದೂ ಅರ್ಚಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಾರಿಯ ದತ್ತ ಜಯಂತಿ 4-5 ದಶಕಗಳ ಹೋರಾಟ ಈಡೇರಿದ ಸಂತೃಪ್ತಿಯ ಜಯಂತಿ ಆಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಉಪಸಮಿತಿಗೆ ಧನ್ಯವಾದಗಳು ಎಂದು ಹೇಳಿದರು.
ಸರ್ಕಾರಿ ದಾಖಲೆಗಳ ಪ್ರಕಾರ ಉಳುವವನೇ ಹೊಲದೊಡೆಯ ಮಸೂದೆಗೆ ಮುಂಚೆ ದತ್ತಾತ್ರೇಯ ದೇವರ ಹೆಸರಲ್ಲಿ 1,861 ಎಕರೆ ಜಾಗ ಇತ್ತು. ಕಾಂಗ್ರೆಸ್ ಆಡಳಿತವಿದ್ದಾಗ ದತ್ತಾತ್ರೇಯ ದೇವರ ಹೆಸರಿನ ಜಮಿನನ್ನು ಗೇಣಿದಾರರೂ ಅಲ್ಲದವರಿಗೆ ಕಾಂಗ್ರೆಸ್ ಮುಖಂಡರು ಅಕ್ರಮವಾಗಿ ಮಂಜೂರು ಮಾಡಿದ್ದರೆಂಬ ಮಾಹಿತಿ ಮೇಲ್ನೋಟಕ್ಕೆ ಲಭಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ಅಕ್ರಮ ಮಂಜೂರಾತಿ ರದ್ದು ಮಾಡಬೇಕು. ಕಾಂಗ್ರೆಸ್ ವಿರೋಧದ ಹಿಂದೆ ಮತೀಯ ಓಲೈಕೆ ಜತೆಗೆ ದತ್ತಾತ್ರೇಯ ದೇವರ ಹೆಸರಿನಲ್ಲಿದ್ದ ಆಸ್ತಿ ಹೊಡೆಯುವ ಸಂಚು ಇತ್ತು ಎಂದ ಅವರು ದತ್ತಾತ್ರೇಯ ದೇವರ ಹೆಸರಿಗೆ ಜಮೀನು ಕಾಯ್ದಿರಿಸಬೇಕು. ಈ ಕುರಿತು ಸಮಗ್ರ ತನಿಖೆ ನಡೆಸಲು ರಾಜ್ಯಮಟ್ಟದ ಅಧಿಕಾರಿಗಳ ತಂಡ ರಚನೆ ಮಾಡಬೇಕು ಎಂದು ಆಗ್ರಹಿಸಿದರು.
ದತ್ತಜಯಂತಿಗೆ ಜನರನ್ನು ಆಹ್ವಾನಿಸಲು ಸಂಘಪರಿವಾರದ ಕಾರ್ಯಕರ್ತರಿಂದ ಬೈಕ್ ರ್‍ಯಾಲಿ
ಹಿಂದೆ ಸುಪ್ರೀಂಕೋರ್ಚ್ ದತ್ತಪೀಠದ ವಿಚಾರದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸರ್ಕಾರಕ್ಕೆ ವಹಿಸಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸುಪ್ರೀಂಕೋರ್ಚ್‌ಗೆ ಪ್ರಮಾಣ ಪತ್ರ ಸಲ್ಲಿಸಿ, ಇದು ಸೂಕ್ಷ್ಮ ವಿಚಾರ ಎಂದು ಹೇಳಿತ್ತು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸಿದ್ದರು. ಸತ್ಯಾಸತ್ಯತೆ ಪರಿಶೀಲಿಸದೆ ಕ್ರಮ ಕೈಗೊಂಡಿದ್ದರು. ಹಿಂದೂ ಅರ್ಚಕರ ನೇಮಕಾತಿ ತಿರಸ್ಕರಿಸಿದ ಸಿದ್ದರಾಮಯ್ಯ ಅವರದು ಯಾವ ಸೀಮೆ ಜಸ್ಟಿಸ್, ಇನ್‌ಸಾನಿಯತ್ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಎಸ್‌ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮಠ ಇತರರು ಉಪಸ್ಥಿತರಿದ್ದರು.