
ಬೆಂಗಳೂರು (ಡಿ.19) : ಬಿಬಿಎಂಪಿಯ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರು ಸಭೆ ನಡೆಸಿದ್ದು, ಈವರೆಗೆ ಬಿಬಿಎಂಪಿ ಹಣಕಾಸು ವಿಭಾಗದಿಂದ ಮೇಲ್ವಿಚಾರಣೆ ನಡೆಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆ ಆರೋಗ್ಯ ವಿಭಾಗಕ್ಕೆ ನೀಡುವುದು. ಜತೆಗೆ, ಬಿಬಿಎಂಪಿ ಆರೋಗ್ಯ ವಿಭಾಗದ ಆರೋಗ್ಯ ವೈದ್ಯಾಧಿಕಾರಿಯನ್ನು ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಿಸುವುದಕ್ಕೆ ನಿರ್ದೇಶಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ ತ್ರಿಲೋಕ ಚಂದ್ರ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಷ್ಟುಇಂದಿರಾ ಕ್ಯಾಂಟೀನ್‌ಗಳಿವೆ, ಎಷ್ಟುಮೊಬೈಲ್ ಕ್ಯಾಂಟೀನ್‌ಗಳಿವೆ. ಎಷ್ಟುಸಂಸ್ಥೆಗಳು ಯಾವ ಯಾವ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡುತ್ತಿವೆ. ಪ್ರತಿ ನಿತ್ಯ ಎಷ್ಟುಪ್ರಮಾಣ ಆಹಾರ ಪೂರೈಕೆ ಆಗುತ್ತಿದೆ. ಆಹಾರ ಪೂರೈಕೆ ಮಾಡುವ ಸಂಸ್ಥೆಗಳಿಗೆ ಪಾವತಿ ಮಾಡಬೇಕಿರುವ ಬಾಕಿ ಮೊತ್ತ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವುದಕ್ಕೆ ಬಿಬಿಎಂಪಿ ಎಂಟು ವಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಪಡೆದ ಬಂದ ನಂತರ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ವಿವರಿಸಿದರು. ಜತೆಗೆ, ಇಂದಿರಾ ಕ್ಯಾಂಟೀನ್‌ಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಸರ್ಕಾರದ ಮುಂದಿನ ಸೂಚನೆಯಂತೆ ಕ್ರಮ ಕೈಗೊಳ್ಳುವುದಕ್ಕೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
Indira Canteen: ಗ್ರಾಹಕರ ಸಂಖ್ಯೆ ಅರ್ಧಕ್ಕರ್ಧ ಕುಸಿತ: ಕಳಪೆ ಗುಣಮಟ್ಟದ ಆಹಾರವೇ ಕಾರಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ